ಚನ್ನಗಿರಿ ತಾಲೂಕಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ

| Published : Mar 02 2025, 01:16 AM IST

ಸಾರಾಂಶ

ತಾಲೂಕಿನಲ್ಲಿ ದ್ವಿತೀಯ ವರ್ಷದ ಪಿಯುಸಿ ಪರೀಕ್ಷೆಯು ಶನಿವಾರದಿಂದ ತಾಲೂಕಿನ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಏಕ ಕಾಲದಲ್ಲಿ ಆರಂಭಗೊಂಡವು.

10 ಗಂಟೆಯಿಂದ ಶುರು । 4 ಕೇಂದ್ರಗಳಲ್ಲಿ ಎಕ್ಸಾಂ

ಚನ್ನಗಿರಿ: ತಾಲೂಕಿನಲ್ಲಿ ದ್ವಿತೀಯ ವರ್ಷದ ಪಿಯುಸಿ ಪರೀಕ್ಷೆಯು ಶನಿವಾರದಿಂದ ತಾಲೂಕಿನ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಏಕ ಕಾಲದಲ್ಲಿ ಆರಂಭಗೊಂಡವು.

ಚನ್ನಗಿರಿ ಪಟ್ಟಣದಲ್ಲಿ ಎರಡು ಪರೀಕ್ಷಾ ಕೇಂದ್ರಗಳು, ಬಸವಾಪಟ್ಟಣ ಮತ್ತು ಸಂತೆಬೆನ್ನೂರು ಗ್ರಾಮದಲ್ಲಿ ತಲಾ ಒಂದೊಂದು ಪರೀಕ್ಷಾ ಕೇಂದ್ರಗಳಿದ್ದು ಒಟ್ಟು ನಾಲ್ಕು ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಶನಿವಾರ ಬೆಳಿಗ್ಗೆ ವಿದ್ಯಾರ್ಥಿಗಳು ಲವಲವಿಕೆಯಿಂದಲೇ ನಿಗದಿತ ಸಮಯಕ್ಕೆ ಸರಿಯಾಗಿ ಆಯಾ ಪರೀಕ್ಷಾ ಕೇಂದ್ರಗಳಿಗೆ ಬಂದು ಕನ್ನಡ ಪಠ್ಯ ವಿಷಯದ ಪರೀಕ್ಷೆಗಳನ್ನು ಬರೆದರು.

ಚನ್ನಗಿರಿ ಪಟ್ಟಣದ ಸ.ಪ.ಪೂ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು 499 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿದ್ದು ಇವರಲ್ಲಿ 43 ಜನ ವಿದ್ಯಾರ್ಥಿಗಳು ಗೈರು ಹಾಜರಾಗಿ 456 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ ಎಂದು ಪ್ರಾಚಾರ್ಯ ಬಸವರಾಜಪ್ಪ ತಿಳಿಸಿದರು.

ಮಣ್ಣಮ್ಮ ಸ್ವತಂತ್ರ ಪ.ಪೂ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು 383 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದು ಇವರಲ್ಲಿ 20 ವಿದ್ಯಾರ್ಥಿಗಳು ಗೈರು ಹಾಜರಾಗಿ 363 ಜನ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ಪ್ರಾಚಾರ್ಯ ಮಂಜುನಾಥ್ ಹೇಳಿದರು.

ಬಸವಾಪಟ್ಟಣದ ಪರೀಕ್ಷಾ ಕೇಂದ್ರದಲ್ಲಿ 269 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿದ್ದು ಇವರಲ್ಲಿ 10 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಪ್ರಾಚಾರ್ಯ ಪದ್ಮಪ್ಪ ತಿಳಿಸಿದ್ದಾರೆ.

ಸಂತೆಬೆನ್ನೂರು ಪರೀಕ್ಷಾ ಕೇಂದ್ರದಲ್ಲಿ 357 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಸಿದ್ದು ಇವರಲ್ಲಿ 23 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು 334 ಮಂದಿ ಪರೀಕ್ಷೆ ಬರೆದಿದ್ದಾರೆ ಎಂದು ಉಪನ್ಯಾಸಕ ಮಧು ತಿಳಿಸಿದರು.

ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಎಲ್ಲಾ ಪರೀಕ್ಷಾ ಕೇಂದ್ರಗಳ ಪ್ರತಿಕೊಠಡಿಗಳಲ್ಲಿ ಸಿ.ಸಿ ಕ್ಯಾಮೆರಾಗಳನ್ನು ಅಳವಡಿಸಿದ್ದು ಪರೀಕ್ಷೆ ಪ್ರಾರಂಭಗೊಂಡು ಮುಗಿಯುವವರೆಗೂ ಪರೀಕ್ಷಾ ಕೇಂದ್ರದ ಸುತ್ತಲೂ 100 ಮೀಟರ್ ಅಂತರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು.