ಯತ್ನಾಳ ಬಣದಿಂದ ಬೆಳೆಗಾವಿಯಲ್ಲಿ ರಹಸ್ಯಸಭೆ

| Published : Dec 02 2024, 01:16 AM IST

ಸಾರಾಂಶ

ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ಬಿಜೆಪಿ ಬಣ ನಗರದ ಖಾಸಗಿ ಹೋಟೆಲ್‌ನಲ್ಲಿ ರಹಸ್ಯ ಸಭೆ ನಡೆಸಿದೆ. ಸಭೆಯಲ್ಲಿ ದೆಹಲಿಯಲ್ಲಿ ಪಕ್ಷದ ವರಿಷ್ಠರ ಜೊತೆಗೆ ಯಾವ ವಿಷಯ ಚರ್ಚೆ ಮಾಡಬೇಕು ಎನ್ನುವುದರ ಕುರಿತು ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ಬಿಜೆಪಿ ಬಣ ನಗರದ ಖಾಸಗಿ ಹೋಟೆಲ್‌ನಲ್ಲಿ ರಹಸ್ಯ ಸಭೆ ನಡೆಸಿದೆ. ಸಭೆಯಲ್ಲಿ ದೆಹಲಿಯಲ್ಲಿ ಪಕ್ಷದ ವರಿಷ್ಠರ ಜೊತೆಗೆ ಯಾವ ವಿಷಯ ಚರ್ಚೆ ಮಾಡಬೇಕು ಎನ್ನುವುದರ ಕುರಿತು ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.

ವಕ್ಫ್ ಸೇರಿ ರಾಜಕೀಯ ಬೆಳವಣಿಗೆ ಕುರಿತು ಗಮನ ಸೆಳೆಯುವುದು, ವಕ್ಫ್​​​ ವಿರುದ್ಧದ ಹೋರಾಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಸೇರಿದಂತೆ ಹಲವರು ವಿರೋಧಿಸುತ್ತಿರುವ ಬಗ್ಗೆ ಗಮನಕ್ಕೆ ತರುವ ಬಗ್ಗೆ ಚರ್ಚೆಯಾಗಿದ್ದು, ಈ ಎಲ್ಲಾ ಅಂಶಗಳನ್ನು ಹೈಕಮಾಂಡ್ ಗಮನಕ್ಕೆ ತರಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮಾಜಿ ಸಚಿವ ಕುಮಾರ ಬಂಗಾರಪ್ಪ, ಅರವಿಂದ ಲಿಂಬಾವಳಿ, ಮಹೇಶ ಕುಮಟಳ್ಳಿ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.