ಮೇಕೆದಾಟು ಯೋಜನೆಗೆ ಐದೇ ನಿಮಿಷದಲ್ಲಿ ಅನುಮತಿ ಕೊಡಿಸುವೆ ಎಂದು ಹೇಳಿದ್ದೀರಿ, ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆಗೆ ೧೦೦ ಎಕರೆ ಜಾಗ ಕೇಳಿದ್ದಿರಿ, ನಾವು ಕೊಡಲು ಸಿದ್ದರಿದ್ದೆವು. ಅದನ್ನು ಅರಿತ ನೀವು ಮತ್ತೆ ೫೦೦ ಎಕರೆ ಬೇಕು ಎಂಬ ವರಸೆ ತೆಗೆದಿರಿ. ಇಂತಹುದನ್ನು ಬಿಟ್ಟು ಬಿಟ್ಟು ಜಿಲ್ಲೆಯ ಜನರ ಋಣ ತೀರಿಸುವ ಕೆಲಸ ಮಾಡಿ.
ಕನ್ನಡಪ್ರಭ ವಾರ್ತೆ ಮಂಡ್ಯ
ಮೈಷುಗರ್ ಕಾರ್ಖಾನೆಯಲ್ಲಿ ಡಿಸ್ಟಿಲರಿ ಘಟಕ ಸ್ಥಾಪನೆಗೆ ಕೇಂದ್ರ ಸರ್ಕಾರದಿಂದ ೨೫೦ ಕೋಟಿ ರು. ಅನುದಾನ ದೊರಕಿಸಿಕೊಟ್ಟು ಜಿಲ್ಲೆಯ ಜನರ ಋಣ ತೀರಿಸುವಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಬಹಿರಂಗ ಸವಾಲು ಹಾಕಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ವತಿಯಿಂದ ನಗರದ ಮಂಡ್ಯ ವಿವಿ ಆವರಣದಲ್ಲಿ ನಡೆದ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮತ್ತು ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ನಿಮ್ಮ ಕೈಯ್ಯಲ್ಲಿ ಏನೂ ಆಗುವುದಿಲ್ಲ ಎಂಬುದನ್ನು ನಿಮ್ಮ ಜೊತೆಯಲ್ಲಿದ್ದುಕೊಂಡೇ ತಿಳಿದಿದ್ದೇನೆ. ಕೇವಲ ಟೀಕೆ ಮಾಡುತ್ತಲೇ ಕಾಲ ಕಳೆಯುತ್ತಿದ್ದೀರಿ, ಯಾವುದೇ ಕೆಲಸ ಮಾಡುತ್ತಿಲ್ಲ ಎಂದು ಛೇಡಿಸಿದರು.
ಮೇಕೆದಾಟು ಯೋಜನೆಗೆ ಐದೇ ನಿಮಿಷದಲ್ಲಿ ಅನುಮತಿ ಕೊಡಿಸುವೆ ಎಂದು ಹೇಳಿದ್ದೀರಿ, ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆಗೆ ೧೦೦ ಎಕರೆ ಜಾಗ ಕೇಳಿದ್ದಿರಿ, ನಾವು ಕೊಡಲು ಸಿದ್ದರಿದ್ದೆವು. ಅದನ್ನು ಅರಿತ ನೀವು ಮತ್ತೆ ೫೦೦ ಎಕರೆ ಬೇಕು ಎಂಬ ವರಸೆ ತೆಗೆದಿರಿ. ಇಂತಹುದನ್ನು ಬಿಟ್ಟು ಬಿಟ್ಟು ಜಿಲ್ಲೆಯ ಜನರ ಋಣ ತೀರಿಸುವ ಕೆಲಸ ಮಾಡಿ ಎಂದು ಸವಾಲು ಹಾಕಿದರು.ನಾನೇ ನಿಮಗೊಂದು ಅವಕಾಶ ಕೊಡುತ್ತೇನೆ. ಸರ್ಕಾರಿ ಸ್ವಾಮ್ಯದ ಸರ್ಕಾರಿ ಕಾರ್ಖಾನೆಯ ಆರ್ಥಿಕ ಪುನಶ್ಚೇತನಕ್ಕೆ ಡಿಸ್ಟಿಲರಿ ಘಟಕ ಅಗತ್ಯವಾಗಿದೆ. ನಿಮ್ಮ ಪ್ರಧಾನಿಯವರಿಗೆ ಮನವರಿಕೆ ಮಾಡಿಕೊಟ್ಟು ಕೇಂದ್ರ ಸರ್ಕಾರದಿಂದ ೨೫೦ ಕೋಟಿ ರು. ವೆಚ್ಚದ ಘಟಕ ಸ್ಥಾಪನೆಗೆ ಅನುದಾನ ಕೊಡಿಸುವ ಕೆಲಸ ಮಾಡಿ. ಆಗ ನಿಮ್ಮನ್ನು ನಾನೇ ಅಭಿನಂದಿಸುತ್ತೇನೆ ಎಂದರು.ನಮ್ಮ ಸರ್ಕಾರ ಮಂಡ್ಯ ಜಿಲ್ಲೆಗೆ ೧೦ ಸಾವಿರ ಕೋಟಿ ಅಭಿವೃದ್ಧಿಗೆ ಕೊಟ್ಟಿದ್ದೇವೆ. ನೀವು ೧೦ ಸಾವಿರ ಕೋಟಿ ರು.ಗೆ ಲೆಕ್ಕ ಕೇಳುತ್ತೀರಾ?, ಲೆಕ್ಕ ಕೊಡೋದು ನಿಮಗಲ್ಲಪ್ಪ, ಜನರಿಗೆ ಲೆಕ್ಕ ಕೊಡುತ್ತೇವೆ. ಕಾಂಗ್ರೆಸ್ ಪಕ್ಷ ನಿಮ್ಮ ತಂದೆಯವರನ್ನು ಪ್ರಧಾನಿ ಮಾಡಿತು. ಕಾಂಗ್ರೆಸ್ ಪಕ್ಷ ನಿಮ್ಮ ಕುಟುಂಬಕ್ಕೆ ಅಧಿಕಾರ ಕೊಟ್ಟರೂ ನೀವು ನಮ್ಮನ್ನು ಟೀಕೆ ಮಾಡ್ತೀರಾ ಎಂದು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.ಕಬ್ಬು ಬೆಲೆಗೆ ಆಗ್ರಹ: ಪೊಲೀಸರಿಂದ ರೈತರ ಬಂಧನ
ಕನ್ನಡಪ್ರಭ ವಾರ್ತೆ ಮಂಡ್ಯಏಕರೂಪ ಸಮಾನ ಶಿಕ್ಷಣ ಹಾಗೂ ಕಬ್ಬು ಬೆಲೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಪೊಲೀಸರು ಬಂಧಿಸಿದರು.ರೈತ ಸಂಘದ ಜಿಲ್ಲಾಧ್ಯಕ್ಷ ಇಂಡುವಾಳು ಚಂದ್ರಶೇಖರ್, ಸಂತೋಷ್ಗೌಡ, ಕೀಳಘಟ್ಟ ನಂಜುಂಡಯ್ಯ, ಸೊಳ್ಳೇಪುರ ಪ್ರಕಾಶ್, ಮಂಜೇಶ್ಗೌಡ, ಬನ್ನೂರು ನಾರಾಯಣ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದರು.ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಜಮಾವಣೆಗೊಂಡ ರೈತರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಲು ಪ್ರತಿಭಟನೆ ನಡೆಸುತ್ತಿದ್ದರು.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ.ವಿ.ಜೆ.ಶೋಭಾರಾಣಿ ಅವರು, ರೈತರ ಮನವೊಲಿಸಲು ಮುಂದಾದರು. ಆದರೆ, ರೈತರು ಯಾವುದೇ ಕಾರಣಕ್ಕೂ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಪಟ್ಟು ಹಿಡಿದರು. ಪೊಲೀಸರ ಮನವೊಲಿಕೆ ವಿಫಲವಾದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬಸ್ನಲ್ಲಿ ಕರೆದೊಯ್ದರು.