ಸಾರಾಂಶ
ಮಲೆ ಮಾದೇಶ್ವರ ಬೆಟ್ಟದ ಶ್ರೀ ಕ್ಷೇತ್ರ ಮಲೆ ಮಾದಪ್ಪನ ದೇವಾಲಯಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತೆ ವಹಿಸಲಾಗಿದೆ.
ಕನ್ನಡಪ್ರಭ ವಾರ್ತೆ ಹನೂರು
ಪಹಲ್ಗಾಮ್ ದಾಳಿ ಹಾಗೂ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದ ದೇವಾಲಯಕ್ಕೆ ಪೊಲೀಸ್ ಇಲಾಖೆ ವತಿಯಿಂದ ಆಯಾಕಟ್ಟಿನ ಸ್ಥಳಗಳಲ್ಲಿ ಪೊಲೀಸರ ನಿಯೋಜನೆ ಮಾಡುವ ಮೂಲಕ ಭದ್ರತೆ ಹೆಚ್ಚಿಸಲಾಗಿದೆ. ತಾಲೂಕಿನ ಮಲೆ ಮಾದೇಶ್ವರ ಬೆಟ್ಟದ ಶ್ರೀ ಕ್ಷೇತ್ರ ಮಲೆ ಮಾದಪ್ಪನ ದೇವಾಲಯಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತೆಯೊಂದಿಗೆ ದೇವಾಲಯ ಮುಂಭಾಗ ಮತ್ತು ಸುತ್ತಲಿನ ಪ್ರದೇಶದ ಆಯಕಟ್ಟಿನ ಸ್ಥಳದಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜನೆ ಮಾಡುವ ಕಟ್ಟೆಚ್ಚರ ವಹಿಸಲಾಗಿದೆ.ಕಟ್ಟುನಿಟ್ಟಿನ ಭದ್ರತೆಗೆ ಕ್ರಮ:
ಪಹಲ್ಗಾಮ್ ದಾಳಿಯಿಂದ ಭಾರತ ಮತ್ತು ಪಾಕಿಸ್ತಾನ ಯುದ್ಧ ನಡೆಯುತ್ತಿರುವುದರಿಂದ ದೇಶದ ಮುಜರಾಯಿ ಇಲಾಖೆಗಳ ದೇವಾಲಯಗಳಿಗೆ ಮತ್ತು ವಿವಿಧ ಅಣೆಕಟ್ಟೆಗಳಿಗೆ ರಾಜ್ಯ ಸರ್ಕಾರವೇ ಕೇಂದ್ರ ಸರ್ಕಾರದ ಸೂಚನೆಯಂತೆ ಇತರ ಪ್ರದೇಶಗಳಲ್ಲಿ ಭದ್ರತೆಗೆ ಸಂಬಂಧಿಸಿದಂತೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕಲ್ಪಿಸುವಂತೆ ಸೂಚನೆ ನೀಡಿದ ಹಿನ್ನೆಲೆ ಕ್ರಮವಹಿಸಲಾಗಿದೆ.11ಸಿಎಚ್ಎನ್12ಮತ್ತು13ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೇವಾಲಯಕ್ಕೆ ವಿಶೇಷ ಪೊಲೀಸ್ ಭದ್ರತೆ ಕಲ್ಪಿಸಿರುವುದು.