ಮಂಗಳೂರು: ‘ಡ್ರಗ್ಸ್ ಫ್ರಿ ಮಂಗಳೂರು’ ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ ನಡೆಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರಕ್ಕೆ ವಿದೇಶದಿಂದ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಆತನಿಂದ 30 ಲಕ್ಷ ರು. ಮೌಲ್ಯದ ಹೈಡ್ರೋವೀಡ್ ಗಾಂಜಾ ಹಾಗೂ 2.5 ಕೆಜಿ ಗಾಂಜಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರಿಗೆ ವಿದೇಶದಿಂದ ಲಕ್ಷಾಂತರ ರು. ಬೆಲೆಬಾಳುವ ನಿಷೇಧಿತ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾವನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಮಂಗಳೂರು ಸಿಸಿಬಿ ಪೊಲೀಸರು ನಗರದ ಕುದ್ರೋಳಿ ಪರಿಸರದಲ್ಲಿ ಅಕ್ರಮವಾದ ಹೈಡ್ರೋವೀಡ್ ಗಾಂಜಾ ಮತ್ತು ಗಾಂಜಾವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪಿ ಪುತ್ತೂರು ಹಾರಾಡಿಯ ಮೊಹಮ್ಮದ್ ಹಫೀಜ್(23)
ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. 30 ಲಕ್ಷ ರುಪಾಯಿ ಮೌಲ್ಯದ 300 ಗ್ರಾಂ ಹೈಡ್ರೋವೀಡ್ ಗಾಂಜಾ ಹಾಗೂ 75,000 ರು. ಮೌಲ್ಯದ 2.5 ಕೆಜಿ ಗಾಂಜಾ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯಿಂದ ವಶಪಡಿಸಿಕೊಂಡ ಸೊತ್ತಿನ ಮೌಲ್ಯ 30,85,500 ರು. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹೈಡ್ರೋವೀಡ್ ಗಾಂಜಾವನ್ನು ಥೈಲ್ಯಾಂಡ್‌ನಿಂದ ತಂದಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಅಕ್ರಮ ಮಾದಕ ವಸ್ತು ಮಾರಾಟ ದಂಧೆಯಲ್ಲಿ ಹಲವಾರು ಮಂದಿ ಭಾಗಿಯಾಗಿದ್ದು, ಈ ನಿಟ್ಟಿನಲ್ಲಿ ಪತ್ತೆ ಕಾರ್ಯ ಮುಂದುವರಿಯಲಿದೆ.ವಿದೇಶಿ ಮಾದಕ ವಸ್ತು ಹೈಡ್ರೋವೀಡ್ ಗಾಂಜಾ ವಶ
ಈ ಅಕ್ರಮ ಮಾದಕ ವಸ್ತು ಮಾರಾಟ ದಂಧೆಯಲ್ಲಿ ಹಲವಾರು ಮಂದಿ ಭಾಗಿಯಾಗಿದ್ದು, ಈ ನಿಟ್ಟಿನಲ್ಲಿ ಪತ್ತೆ ಕಾರ್ಯ ಮುಂದುವರಿಯಲಿದೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.