ಅಕ್ರಮವಾಗಿ ಸಾಗಿಸುತ್ತಿದ್ದ ದಿಮ್ಮಿಗಳ ವಶ

| Published : Oct 17 2025, 01:00 AM IST

ಸಾರಾಂಶ

ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಅರಣ್ಯ ಇಲಾಖೆಯವರು ವಾಹನ ಸಮೇತ ವಶಪಡಿಸಿಕೊಂಡಿರುವ ಘಟನೆ ತಾಲೂಕಿನ ಅನೇಮಹಲ್ ನಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ೭೫ ತಾಲೂಕಿನ ಆನೇಮಹಲ್ ಸಮೀಪ ಲಾರಿಯಲ್ಲಿ ಅಕ್ರಮವಾಗಿ ಸಾಗಾಟವಾಗುತ್ತಿದ್ದ ಕಾಡು ಜಾತಿಯ ಒಂದು ಲೋಡ್ ಮರವನ್ನು ವಶಪಡಿಸಿಕೊಳ್ಳಲಾಗಿದೆ. ತಾಲೂಕಿನಲ್ಲಿ ಅರಣ್ಯ ಇಲಾಖೆ ವತಿಯಿಂದ ನಿರಂತರವಾಗಿ ಅಕ್ರಮವಾಗಿ ಸಾಗಾಟ ಮಾಡಲಾಗುವ ದಿಮ್ಮಿಗಳನ್ನು ಅರಣ್ಯ ಇಲಾಖೆ ವತಿಯಿಂದ ವಶಪಡಿಸಿಕೊಳ್ಳಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಸಕಲೇಶಪುರ

ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಅರಣ್ಯ ಇಲಾಖೆಯವರು ವಾಹನ ಸಮೇತ ವಶಪಡಿಸಿಕೊಂಡಿರುವ ಘಟನೆ ತಾಲೂಕಿನ ಅನೇಮಹಲ್ ನಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ ೭೫ ತಾಲೂಕಿನ ಆನೇಮಹಲ್ ಸಮೀಪ ಲಾರಿಯಲ್ಲಿ ಅಕ್ರಮವಾಗಿ ಸಾಗಾಟವಾಗುತ್ತಿದ್ದ ಕಾಡು ಜಾತಿಯ ಒಂದು ಲೋಡ್ ಮರವನ್ನು ವಶಪಡಿಸಿಕೊಳ್ಳಲಾಗಿದೆ. ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್, ಉಪವಲಯ ಅರಣ್ಯ ಅಧಿಕಾರಿ ಮಂಜುನಾಥ್ ಮತ್ತು ಗಸ್ತು ಅರಣ್ಯ ಪಾಲಕರಾದ ಉಮೇಶ್, ಲೋಕೇಶ್ ,ಜಯಸ್ವಾಮಿ ಹಾಗೂ ಅರಣ್ಯ ವೀಕ್ಷಕ ಲೋಕೇಶ್ ಮತ್ತು ಡ್ರೈವರ್ ಆಶ್ರಯ ದಾಳಿ ನಡೆಸಿ ವಾಹನವನ್ನು ವಶಪಡಿಸಿಕೊಂಡು ಅರಣ್ಯ ಮೊಕದಮ್ಮೆ - ೩೯/೨೦೨೫-೨೬ ದಾಖಲಿಸಿದ್ದಾರೆ. ತಾಲೂಕಿನಲ್ಲಿ ಅರಣ್ಯ ಇಲಾಖೆ ವತಿಯಿಂದ ನಿರಂತರವಾಗಿ ಅಕ್ರಮವಾಗಿ ಸಾಗಾಟ ಮಾಡಲಾಗುವ ದಿಮ್ಮಿಗಳನ್ನು ಅರಣ್ಯ ಇಲಾಖೆ ವತಿಯಿಂದ ವಶಪಡಿಸಿಕೊಳ್ಳಲಾಗುತ್ತಿದೆ. ಹೀಗಾಗಿ ಅಕ್ರಮವಾಗಿ ಬಿಲೇಟ್ಸ್ ಸಾಗಿಸುವರ ಸಂಖ್ಯೆ ಬಹಳ ಕಡಿಮೆಯಾಗಿದೆ.