ಸಾರಾಂಶ
ತಾಲೂಕಿನ ಬೈಚಾಪುರ ಗ್ರಾಪಂ ವ್ಯಾಪ್ತಿಯ ಹನುಮೇನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರ ಚುನಾವಣೆಯಲ್ಲಿ ವೆಂಕಟೇಶ್ ಅವಿರೋಧವಾಗಿ ಆಯ್ಕೆಯಾದ್ದಾರೆ.
ಕನ್ನಡಪ್ರಭ ವಾರ್ತೆ ಕೊರಟಗೆರೆ
ತಾಲೂಕಿನ ಬೈಚಾಪುರ ಗ್ರಾಪಂ ವ್ಯಾಪ್ತಿಯ ಹನುಮೇನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರ ಚುನಾವಣೆಯಲ್ಲಿ ವೆಂಕಟೇಶ್ ಅವಿರೋಧವಾಗಿ ಆಯ್ಕೆಯಾದ್ದಾರೆ.ನೂತನ ಅಧ್ಯಕ್ಷ ವೆಂಕಟೇಶ್ ಮಾತನಾಡಿ ಹನುಮೇನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಎಲ್ಲಾ ನಿರ್ದೇಶಕರ ಹಾಗೂ ಗ್ರಾಮದ ಮುಖಂಡರು ಒಮ್ಮತದಿಂದ ನನ್ನ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಅವರೆಲ್ಲರ ಜೊತೆಗೂಡಿ ನಮ್ಮ ಊರಿನ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಕೆಲಸಗಳನ್ನು ಮಾಡುತ್ತೇವೆ ಎಂದು ತಿಳಿಸಿದರು. ತುಮುಲ್ ನಿರ್ದೇಶಕ ಸಿದ್ದಗಂಗಯ್ಯ ಮಾತನಾಡಿ ನಮ್ಮ ತಾಲೂಕಿನ ಪ್ರತಿ ಹಾಲು ಉತ್ಪಾದಕರ ಸಂಘಕ್ಕೆ ನಮ್ಮ ಜಿಲ್ಲಾ ತುಮುಲ್ ವತಿಯಿಂದ ರೈತರಿಗೆ ಅನುಕೂಲವಾಗುವ ಎಲ್ಲ ರೀತಿಯ ಕೆಲಸಗಳನ್ನು ಮಾಡುತ್ತೇವೆ. ಯುವಕರು ಅತಿ ಹೆಚ್ಚು ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕು ತಂದೆ ತಾಯಿಗೆ ಆಸರೆಯಾಗಿ ಹಳ್ಳಿಗಳಲ್ಲಿ ನಿಲ್ಲಬೇಕು. ಆಗ ಪ್ರತಿ ಗ್ರಾಮವು ಮಾದರಿ ಗ್ರಾಮವಾಗಿ ಮಾರ್ಪಾಡಾಗುತ್ತದೆ. ರೈತರ ಅನುಕೂಲಕ್ಕಾಗಿ ಹೈನುಗಾರಿಕೆಗೆ ಅತಿ ಹೆಚ್ಚು ಒತ್ತು ಕೊಡಲಾಗುವುದು ಎಂದರು. ಇದೇ ಸಂದರ್ಭದಲ್ಲಿ ಹನುಮೇನಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ರಂಗಶಾಮಯ್ಯ ದೇವರಾಜು ರಂಗ ಹನುಮಯ್ಯ ವೆಂಕಟರಮಣಪ್ಪ ಜಯ ರಂಗಪ್ಪ ಹನುಮಂತರಾಯಪ್ಪ ರಂಗಮ್ಮ ಹನುಮಕ್ಕ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.