ಸಾರಾಂಶ
ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ನಾಪೋಕ್ಲು: ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ಕೂಡಿಗೆ ಕ್ರೀಡಾ ಶಾಲೆಯಲ್ಲಿ ಇತ್ತೀಚಿಗೆ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಅಥ್ಲೇಟಿಕ್ಸ್ ಕ್ರೀಡಾಕೂಟದಲ್ಲಿ ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಾದ ಅಶಿಕ್ ಮಂದಣ್ಣ ಕೆ. ಪಿ ಜಾವೆಲಿನ್ ಎಸೆತದಲ್ಲಿ ಪ್ರಥಮ ಸ್ಥಾನ, ಜೀವ ನಾಣಯ್ಯ 400 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಶರಣ್ ಚಂಗಪ್ಪ ಪಿ. ಸಿ ತಟ್ಟೆ ಎಸೆತದಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ. ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ವ್ಯವಸ್ಥಾಪಕಿ ನಾಟೋಳಂಡ ಸರೋಜಿನಿ, ಶಾಲಾ ಮುಖ್ಯ ಶಿಕ್ಷಕರಾದ ಕುದುಪಜೆ ಕವನ್ ಕುಮಾರ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸ್ವರೂಪ ಕೆ. ಬಿ. ದೈಹಿಕ ಶಿಕ್ಷಣ ಶಿಕ್ಷಕಿ ಕರವಂಡ ಸೀಮಾ ಗಣಪತಿ ಮಾರ್ಗದರ್ಶನ ನೀಡಿದ್ದರು.;Resize=(128,128))