ಕನ್ನಡಪ್ರಭ ವಾರ್ತೆ ಜಮಖಂಡಿಜಿಲ್ಲಾಡಳಿತ, ಜಿ.ಪಂ, ಯುವಜನ ಸಬಲೀಕರಣ ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಗಳಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಭಾಗವಹಿಸಿ ಉತ್ತಮ ಸಾಧನೆ ತೋರಿದ್ದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಪ್ರಾಂಶುಪಾಲೆ ಡಾ.ಸುನಂದಾ ಶಿರೂರ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಜಮಖಂಡಿ

ಜಿಲ್ಲಾಡಳಿತ, ಜಿ.ಪಂ, ಯುವಜನ ಸಬಲೀಕರಣ ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಗಳಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಭಾಗವಹಿಸಿ ಉತ್ತಮ ಸಾಧನೆ ತೋರಿದ್ದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಪ್ರಾಂಶುಪಾಲೆ ಡಾ.ಸುನಂದಾ ಶಿರೂರ ತಿಳಿಸಿದ್ದಾರೆ.

ವ್ಹಾಲಿಬಾಲ್‌ ಕ್ರೀಡೆಗಳಲ್ಲಿ ಸವಿತಾ ಕುರಣಿ, ಅಶ್ವಿನಿ ನ್ಯಾಮಗೌಡ, ಶೋಭಾ ಕಣಬೂರ, ಅನಸೂಯಾ ಬಿರಾದಾರ, ಅಲ್ಪಿಯಾ ನದಾಫ್‌, ಪೂಜಾ ಕುರಣಿ, ದೀಪಾ ಚಳಕನ್ನವರ, ಸಿಮ್ರನ್‌ ನದಾಫ, ಅನಿಫಾ ನದಾಫ್‌ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಎತ್ತರ ಜಿಗಿತದಲ್ಲಿ ಪ್ರೀತಿ ಶಿರಗೂರ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿಭಾಗ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಹಾಗೂ ಮಹಾವಿದ್ಯಾಲಯದ ಕ್ರೀಡಾ ನಿರ್ದೇಶಕ ಡಾ.ಬಜರಂಗ ಜಾಧವ, ಕಲಾವತಿ ಪೋತಿ ಅವರನ್ನು ವಿದ್ಯಾಲಯದ ಪ್ರಾಂಶುಪಾಲೆ ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.