ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಯಲ್ಲಿ ಚೇರಂಬಾಣೆಯ ಶ್ರೀ ರಾಜ ರಾಜೇಶ್ವರಿ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿಯಾದ ವರುಣಿಕ ಪಿ. ಎಂ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ.

ನಾಪೋಕ್ಲು: ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಯಲ್ಲಿ ಚೇರಂಬಾಣೆಯ ಶ್ರೀ ರಾಜ ರಾಜೇಶ್ವರಿ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿಯಾದ ವರುಣಿಕ ಪಿ. ಎಂ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ.

ಕುಶಾಲನಗರ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಯಲ್ಲಿ ಚೇರಂಬಾಣೆಯ ಶ್ರೀ ರಾಜ ರಾಜೇಶ್ವರಿ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿಯಾದ ವರುಣಿಕ ಪಿ. ಎಂ. ಭಾವಗೀತೆ ಸ್ಪರ್ಧೆ ಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಹಾಗೂ ಹತ್ತನೇ ತರಗತಿಯ ವಿದ್ಯಾರ್ಥಿನಿ ತೃಶಾ ಎ. ಎಸ್ ಅಶುಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ. ವಿಜೇತ ವಿದ್ಯಾರ್ಥಿಗಳೊಂದಿಗೆ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕರಾದ ಕುದುಪಜೆ ಕವನ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಬಬ್ಬಿರ ಸ್ವರೂಪ್, ಪ್ರೌಢಶಾಲಾ ಶಿಕ್ಷಕರಾದ ಮನೋಜ್ ಕುಮಾರ್ ಜೆ. ಆರ್, ಸಂಧ್ಯಾ ಬಿ. ಎಸ್ ಮಾರ್ಗದರ್ಶನ ನೀಡಿದ್ದಾರೆ.