ಸಾರಾಂಶ
ಭಾರತ ಸಂವಿಧಾನ ಜಾರಿಗೆ ಬಂದು 75ನೇ ವರ್ಷಾಚಣೆ ಅಂಗವಾಗಿ ಜಿಲ್ಲೆಯಾದ್ಯಂತ ಹಮ್ಮಿಕೊಂಡ ಸಂವಿಧಾನ ಜಾಗೃತಿ ಜಾಥಾ ಹಾಗೂ ಸ್ತಬ್ಧ ಚಿತ್ರವು ಬೆಳಗಾವಿ ವಿಭಾಗಮಟ್ಟದ ಬಹುಮಾನಕ್ಕೆ ಆಯ್ಕೆಯಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದ್ದಾರೆ.
ಬಾಗಲಕೋಟೆ: ಭಾರತ ಸಂವಿಧಾನ ಜಾರಿಗೆ ಬಂದು 75ನೇ ವರ್ಷಾಚಣೆ ಅಂಗವಾಗಿ ಜಿಲ್ಲೆಯಾದ್ಯಂತ ಹಮ್ಮಿಕೊಂಡ ಸಂವಿಧಾನ ಜಾಗೃತಿ ಜಾಥಾ ಹಾಗೂ ಸ್ತಬ್ಧ ಚಿತ್ರವು ಬೆಳಗಾವಿ ವಿಭಾಗಮಟ್ಟದ ಬಹುಮಾನಕ್ಕೆ ಆಯ್ಕೆಯಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲಾಡಳಿತ ಸಂವಿಧಾನ ಜಾಗೃತಿ ಜಾಥಾ ಯಶಸ್ವಿಯಾಗಿ ಕಾರ್ಯಯೋಜಿಸಿ ಎಲ್ಲ ಗ್ರಾಮ ಪಂಚಾಯತಿ ಹಾಗೂ ನಗರ ಪ್ರದೇಶ ವ್ಯಾಪ್ತಿಯಲ್ಲಿ ನಡೆಸಲಾಯಿತು. ಸ್ತಬ್ಧಚಿತ್ರದಲ್ಲಿ ಬಸವಣ್ಣನವರ ಅನುಭವ ಮಂಟಪ, ಆಧುನಿಕ ಪಾರ್ಲಿಮೆಂಟ್ ಜೊತೆಗೆ ಅಂಬೇಡ್ಕರ್, ಬಸವಣ್ಣನವರ ಪ್ರತಿಮೆ ನಿರ್ಮಿಸಲಾಗಿತ್ತು. ಇದಕ್ಕಾಗಿ ಕೂಡಲ ಸಂಗಮದ ಕಲಾಸಂಗ್ರಹಾಲಯದಿಂದ ಬಸವಣ್ಣನವರ ಮೂರ್ತಿ ಬಳಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.