ಸಾರಾಂಶ
ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಜಿ. ಪ್ರಭು ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಮಿತಿ ಸಭೆಯಲ್ಲಿ ಅರ್ಜಿದಾರರ ಸಮ್ಮುಖದಲ್ಲಿ ಲಾಟರಿ ಎತ್ತುವ ಮೂಲಕ ಫಲಾನುಭವಿಗಳ ಆಯ್ಕೆ ಮಾಡಲಾಯಿತು.
ಕನ್ನಡಪ್ರಭ ವಾರ್ತೆ ತುಮಕೂರು
ಜಿಲ್ಲಾ ಪಂಚಾಯತಿಯಲ್ಲಿಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ವಿವಿಧ ನಿಗಮಗಳ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾಕಲ್ಯಾಣ, ಸ್ವಾವಲಂಬಿ ಸಾರಥಿ ಯೋಜನೆ, ವಿಭೂತಿ ಘಟಕ, ಭೋಜನಾಲಯ ಕೇಂದ್ರ ಹಾಗೂ ಮಿಲ್ಟ್ರಿ ಹೋಟೆಲ್ ಯೋಜನೆಗಳಡಿ ಆರ್ಥಿಕ ಸೌಲಭ್ಯ ನೀಡಲು 322 ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು.ಜಿಲ್ಲಾ ಪಂಚಾಯತ್ ಸಿಇಒ ಜಿ. ಪ್ರಭು ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಮಿತಿ ಸಭೆಯಲ್ಲಿ ಅರ್ಜಿದಾರರ ಸಮ್ಮುಖದಲ್ಲಿ ಲಾಟರಿ ಎತ್ತುವ ಮೂಲಕ ಫಲಾನುಭವಿಗಳ ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ೨೧೦ ಅರ್ಜಿಗಳು ಸ್ವೀಕೃತಗೊಂಡಿದ್ದು, 22 ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು. ಅದೇ ರೀತಿ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ 1599 ಅರ್ಜಿಗಳು ಸ್ವೀಕೃತಗೊಂಡಿದ್ದು, 150 ಫಲಾನುಭವಿಗಳು; ಕರ್ನಾಟಕ ವೀರಶೈವ ಲಿಂಗಾಯತ ಸಮುದಾಯ ಅಭಿವೃದ್ಧಿ ನಿಗಮದಿಂದ ೮೫೮ ಅರ್ಜಿಗಳು ಸ್ವೀಕೃತಗೊಂಡಿದ್ದು, 27 ಫಲಾನುಭವಿಗಳು; ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 362ಅರ್ಜಿಗಳು ಸ್ವೀಕತಗೊಂಡಿದ್ದು, 28 ಫಲಾನುಭವಿಗಳು; ಕರ್ನಾಟಕ ಉಪ್ಪಾರ ಸಮುದಾಯ ಅಭಿವೃದ್ಧಿ ನಿಗಮದಿಂದ 680 ಅರ್ಜಿಗಳು ಸ್ವೀಕೃತಗೊಂಡಿದ್ದು, ೮ ಫಲಾನುಭವಿಗಳು; ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 3043 ಅರ್ಜಿಗಳು ಸ್ವೀಕೃತಗೊಂಡಿದ್ದು, 28೮ ಫಲಾನುಭವಿಗಳು; ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ 247 ಅರ್ಜಿಗಳು ಸ್ವೀಕೃತಗೊಂಡಿದ್ದು, 26 ಫಲಾನುಭವಿಗಳು; ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ 786 ಅರ್ಜಿಗಳು ಸ್ವೀಕೃತಗೊಂಡಿದ್ದು, 12ಫಲಾನುಭವಿಗಳು; ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ 332 ಅರ್ಜಿಗಳು ಸ್ವೀಕೃತಗೊಂಡಿದ್ದು, 7 ಫಲಾನುಭವಿಗಳು; ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ 99 ಅರ್ಜಿಗಳು ಸ್ವೀಕೃತಗೊಂಡಿದ್ದು, 14 ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು.ಎಲ್ಲಾ ನಿಗಮಗಳಿಂದ 8216 ಅರ್ಜಿದಾರರಲ್ಲಿ 322 ಫಲಾನುಭವಿಗಳನ್ನು ಆಯ್ಕೆ ಮಾಡಿ ಇವರಿಗೆ 464.70ಲಕ್ಷ ರು ಆರ್ಥಿಕ ಸೌಲಭ್ಯ ಮಂಜೂರು ಮಾಡಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಹಾಲಸಿದ್ಧಪ್ಪ, ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಕಾಶ್, ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ವೆಂಕಟರಾಜು ಬಿ.ವಿ. ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.