ಸಾರಾಂಶ
ತಿಕೋಟಾದ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಭಾಗ್ಯ ಯೋಜನೆಯ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಲಾಯಿತು. ಸರ್ಕಾರದಿಂದ ನಿಗದಿಪಡಿಸಿದ ಗುರಿಗಿಂತ ಹೆಚ್ಚಿನ ರೈತರು ಬೇಡಿಕೆಗಾಗಿ ಅರ್ಜಿ ಸಲ್ಲಿಸಿದ್ದು, ಕಾರಣ ಲಾಟರಿ ಮೂಲಕ ಫಲಾನುಭವಿಗಳನ್ನು ಅಯ್ಕೆ ಮಾಡಲಾಯಿತು.
ಕನ್ನಡಪ್ರಭ ವಾರ್ತೆ ವಿಜಯಪುರ
ತಿಕೋಟಾದ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಭಾಗ್ಯ ಯೋಜನೆಯ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಲಾಯಿತು. ಸರ್ಕಾರದಿಂದ ನಿಗದಿಪಡಿಸಿದ ಗುರಿಗಿಂತ ಹೆಚ್ಚಿನ ರೈತರು ಬೇಡಿಕೆಗಾಗಿ ಅರ್ಜಿ ಸಲ್ಲಿಸಿದ್ದು, ಕಾರಣ ಲಾಟರಿ ಮೂಲಕ ಫಲಾನುಭವಿಗಳನ್ನು ಅಯ್ಕೆ ಮಾಡಲಾಯಿತು.ಯುವ ಮುಖಂಡ ಜೆ.ಎಂ.ಪಾಟೀಲ ಮಾತನಾಡಿ, ಈಗ ಕಡಿಮೆ ಪ್ರಮಾಣದಲ್ಲಿ ಕೃಷಿ ಹೊಂಡಗಳು ಬಂದಿದ್ದು ಲಾಟರಿ ಮಾಡಲಾಗಿದೆ. ಇನ್ನೂ ಹೆಚ್ಚಿನ ಅನುದಾನಕ್ಕಾಗಿ ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಪಿಕೆಪಿಎಸ್ ನಿರ್ದೇಶಕ ಬಿ.ಜಿ. ವಿಭೂತಿ ಮಾತನಾಡಿ, ಈ ತಾಲೂಕಿನಲ್ಲಿ ನೀರಾವರಿ ಪ್ರದೇಶ ಹೆಚ್ಚಾಗಿದೆ. ಹೀಗಾಗಿ ಬೇಡಿಕೆ ಹೆಚ್ಚಾಗುವುದು ಸಹಜ. ಮಾನ್ಯ ಎಂ.ಬಿ. ಪಾಟೀಲ ಸಾಹೇಬರಿಗೆ ಹೇಳಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಲು ಪ್ರಯತ್ನಿಸಲಾಗುವುದು ಎಂದರು.ಕೃಷಿ ಅಧಿಕಾರಿ ಶ್ರೀಮತಿ ಟಿ.ಎ.ಸೊಲ್ಲಾಪುರಕರ ಮಾತನಾಡಿ, ಹೆಚ್ಚಿನ ಅನುದಾನ ಬಂದಾಗ ಇದೇ ಅರ್ಜಿದಾರರನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.
ಕೃಷಿ ಅಧಿಕಾರಿ ಆರ್.ಎಂ.ಬಿದರಿ ಕಾರ್ಯಕ್ರಮ ನಿರೂಪಿಸಿದರು. ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಸೋಮಶೇಖರ ಜತ್ತಿ ಮಾತನಡಿದರು. ಸಹಾಯಕ ಕೃಷಿ ಅಧಿಕಾರಿ ಎಂ.ಎಸ್.ತಂಗಾ, ಎಂ.ಎಂ.ಬಾಳಿಕಾಯಿ ಕಾರ್ಯಕ್ರಮ ನಿರೂಪಿಸಿದರು.