ಸಾರಾಂಶ
Selection of beneficiaries tomorrow for tadapal distribution
ಕನ್ನಡಪ್ರಭ ವಾರ್ತೆ ಶಹಾಪುರ
ತಾಲೂಕಿನ ಗೋಗಿ ಹೋಬಳಿ ರೈತ ಸಂಪರ್ಕ ಕೇಂದ್ರದಲ್ಲಿ ಗುರುವಾರ ಬೆ.10.30ಕ್ಕೆ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ತಾಡಪಲ್ ವಿತರಣೆ ಸಂಬಂಧ ಫಲಾನುಭವಿಗಳ ಆಯ್ಕೆ ನಡೆಯಲಿದೆ. ಲಾಟರಿ ಮೂಲಕ ಫಲಾನುಭವಿಗಳ ಆಯ್ಕೆ ಮಾಡಲಾಗುವುದು ಎಂದು ಕೃಷಿ ಅಧಿಕಾರಿ ಪರಶುರಾಮ್ ನಡುಮನಿ ತಿಳಿಸಿದ್ದಾರೆ. ಈ ರೈತ ಸಂಪರ್ಕ ಕೇಂದ್ರಕ್ಕೆ ಒಳಪಡುವ ಅರ್ಜಿ ಸಲ್ಲಿಸಿದ ಎಲ್ಲಾ ರೈತ ಫಲಾನುಭವಿಗಳು ಲಾಟರಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.