ದೇಶಾದ್ಯಂತ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಉದ್ದೇಶದಿಂದ ಎಐಸಿಸಿ ‘ಸೃಜನ ಸಂಘಟನಾ ಅಭಿಯಾನ’ವನ್ನು ರೂಪಿಸಿದೆ. ಅದರನ್ವಯವೇ ಕರ್ನಾಟಕ ರಾಜ್ಯದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಆಗಸ್ಚ್ ಅಂತ್ಯದಲ್ಲಿ ಜಿಲ್ಲಾಧ್ಯಕ್ಷರ ನೇಮಕ ನಡೆಯಲಿದೆ ಎಂದು ಎಐಸಿಸಿ ವೀಕ್ಷಕ ಹಿಮ್ಮತ್ ಸಿಂಗ್ ಪಟೇಲ್ ತಿಳಿಸಿದ್ದಾರೆ.
ಉಡುಪಿ: ದೇಶಾದ್ಯಂತ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಉದ್ದೇಶದಿಂದ ಎಐಸಿಸಿ ‘ಸೃಜನ ಸಂಘಟನಾ ಅಭಿಯಾನ’ವನ್ನು ರೂಪಿಸಿದೆ. ಅದರನ್ವಯವೇ ಕರ್ನಾಟಕ ರಾಜ್ಯದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಆಗಸ್ಚ್ ಅಂತ್ಯದಲ್ಲಿ ಜಿಲ್ಲಾಧ್ಯಕ್ಷರ ನೇಮಕ ನಡೆಯಲಿದೆ ಎಂದು ಎಐಸಿಸಿ ವೀಕ್ಷಕ ಹಿಮ್ಮತ್ ಸಿಂಗ್ ಪಟೇಲ್ ತಿಳಿಸಿದ್ದಾರೆ.
ಶನಿವಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ರಾಹುಲ್ ಗಾಂಧಿ ನಿರ್ದೇಶನದಂತೆ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನನ್ನು ತಲುಪುವವರಿಗೆ ಪಕ್ಷದ ನಾಯಕತ್ವವನ್ನು ನೀಡಲಾಗುತ್ತಿದೆ. ಜಿಲ್ಲಾಧ್ಯಕ್ಷರನ್ನು ಕಾರ್ಯಕರ್ತರೇ ಆಯ್ಕೆ ಮಾಡುತ್ತಾರೆ. ಅದಕ್ಕಾಗಿ ಉಡುಪಿ ಜಿಲ್ಲೆಯಲ್ಲಿ 10 ಬ್ಲಾಕ್‌ಗಳ ಕಾರ್ಯಕರ್ತರ ಅಭಿಪ್ರಾಯವನ್ನು ಪಡೆದು, ಬಹುಮತದ ಬೆಂಬಲ, ಪಕ್ಷದ ಮೇಲಿನ ನಿಷ್ಠೆ, ತಳಮಟ್ಟದ ಕಾರ್ಯಕರ್ತರೊಂದಿಗೆ ಸಂಪರ್ಕ ಇತ್ಯಾದಿ ಅಂಶಗಳನ್ನು ಪರಿಗಣಿಸಿ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗುತ್ತಿದೆ ಎಂದರು.ವೀಕ್ಷಕರ ವರದಿ ಸಿದ್ಧಪಡಿಸಲು ಕನಿಷ್ಠ 10 ದಿನಗಳು ಬೇಕಾಗುತ್ತದೆ. ವರದಿ ಸಲ್ಲಿಕೆಯಾದ ಬಳಿಕ ಪರಿಶೀಲನಾ ಸಭೆ ನಡೆದು, ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಆಗಸ್ಟ್ ಅಂತ್ಯದೊಳಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ ಕುಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಪಕ್ಷ ಪ್ರಮುಖರಾದ ಶಾಲೆಟ್ ಪಿಂಟೊ, ಕಿಶನ್ ಹೆಗ್ಡೆ ಕೊಳ್ಕೆಬೈಲು, ರಮೇಶ ಕಾಂಚನ್, ಹರೀಶ ಕಿಣಿ ಅಲೆವೂರು, ಪ್ರಸಾದರಾಜ್ ಕಾಂಚನ್ ಮೊದಲಾದವರಿದ್ದರು.