ಬಳ್ಳಾರಿ ವಿವಿಯಲ್ಲಿ ಸ್ವಯಂ ರಕ್ತದಾನ ಆರೋಗ್ಯ ತಪಾಸಣೆ ಶಿಬಿರ

| Published : Jul 28 2024, 02:09 AM IST / Updated: Jul 28 2024, 02:10 AM IST

ಸಾರಾಂಶ

ರಕ್ತದಾನ ಮಾಡಿದಲ್ಲಿ ನಮ್ಮಲ್ಲಿ ನವಚೈತನ್ಯ ಹುಟ್ಟುತ್ತದೆ ಹಾಗೂ ರಕ್ತದಾನವು ಮತೊಬ್ಬರ ಜೀವವನ್ನು ಉಳಿಸುತ್ತದೆ.

ಬಳ್ಳಾರಿ: ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 15ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಬಳ್ಳಾರಿ ಯುವ ರೆಡ್ ಕ್ರಾಸ್ ಘಟಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ವಿವಿಯ ರಾಷ್ಟ್ರೀಯ ಸೇವಾ ಯೋಜನೆ ಮತ್ತು ವಿದ್ಯಾರ್ಥಿ ಕಲ್ಯಾಣ ಘಟಕದಿಂದ ಸ್ವಯಂ ರಕ್ತದಾನ ಹಾಗೂ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಚಾಲನೆ ನೀಡಿ ಮಾತನಾಡಿದ ಬಳ್ಳಾರಿ ಲೋಕಾಯುಕ್ತ ಎಸ್‌ಪಿ ಸಿದ್ಧರಾಜು ಚಂದ್ರಪ್ಪ ಅವರು, ಯುವ ಪೀಳಿಗೆ ಸ್ವಯ ಪ್ರೇರಿತರಾಗಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಿ, ಉತ್ತಮ ಆರೋಗ್ಯವನ್ನು ರೂಪಿಸಿಕೊಳ್ಳಬೇಕು. ರಕ್ತದಾನ ಮಾಡಿದಲ್ಲಿ ನಮ್ಮಲ್ಲಿ ನವಚೈತನ್ಯ ಹುಟ್ಟುತ್ತದೆ ಹಾಗೂ ರಕ್ತದಾನವು ಮತೊಬ್ಬರ ಜೀವವನ್ನು ಉಳಿಸುತ್ತದೆ ಎಂದರು.

ವಿಮ್ಸ್ ನಿರ್ದೇಶಕ ಡಾ.ಗಂಗಾಧರಗೌಡ ಮಾತನಾಡಿ, ಇಂದಿನ ದಿನಗಳಲ್ಲಿ ರಕ್ತದ ಅಗತ್ಯತೆ ಹೆಚ್ಚಾಗಿದ್ದು, ಶಸ್ತ್ರಚಿಕಿತ್ಸೆ, ಮಹಿಳೆ ಹಾಗೂ ದೇಹದಲ್ಲಿ ರಕ್ತದ ಪ್ರಮಾಣ ಕಡಿಮೆ ಇರುವ ರೋಗಿಗಳಿಗೆ ಅವಶ್ಯಕವಾಗಿದೆ ಎಂದರು.

ಕಾಲಕಾಲಕ್ಕೆ ರಕ್ತದಾನ ಮಾಡುವುದರಿಂದ ಆರೋಗ್ಯ ಸಮತೋಲನವಾಗಿರಲು ಸಹಾಯಕವಾಗುತ್ತದೆ ಎಂದು ವಿವಿಯ ಕುಲಸಚಿವ ರುದ್ರೇಶ್ ಎಸ್.ಎನ್ ಹೇಳಿದರು.

ವಿವಿಯ ಕುಲಪತಿ ಪ್ರೊ.ತಿಪ್ಪೇರುದ್ರಪ್ಪ ಜೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿವಿಯ ಎಲ್ಲ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಂದ ಸೇರಿದಂತೆ 150ಕ್ಕೂ ಹೆಚ್ಚು ರಕ್ತದಾನಿಗಳು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು.

ಕಾರ್ಯಕ್ರಮದಲ್ಲಿ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ. ರಮೇಶ್ ಓಲೇಕಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಬಸರೆಡ್ಡಿ, ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಎಂ.ಎ. ಶಕೀಬ್, ವಿದ್ಯಾರ್ಥಿ ಕಲ್ಯಾಣ ಘಟಕದ ನಿರ್ದೇಶಕ ಡಾ.ಶಶಿಕಾಂತ ಮಜ್ಜಗಿ, ರಾಷ್ಟ್ರೀಯ ಸೇವಾಯೋಜನೆಯ ಸಂಯೋಜಕ ಡಾ.ಕುಮಾರ, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ಮುಖ್ಯಸ್ಥ ಡಾ.ಶಶಿಧರ ಕೆಲ್ಲೂರ, ವಿವಿಯ ಯುವ ರೆಡ್‌ಕ್ರಾಸ್ ನೋಡಲ್ ಅಧಿಕಾರಿ ಡಾ.ರಾಜೇಂದ್ರ ಪ್ರಸಾದ್, ಹಿರಿಯ ರಕ್ತದಾನಿ ಎಸ್‌ಬಿಐ ದೇವಣ್ಣ ಸೇರಿದಂತೆ ವಿವಿಯ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.