ಸ್ವಯಂ ನಿಯಂತ್ರಣವೇ ಏಡ್ಸ್ ನಿಯಂತ್ರಣಕ್ಕೆ ದಾರಿ

| Published : Aug 31 2024, 01:33 AM IST

ಸಾರಾಂಶ

ಎಚ್‌ಐವಿ ಸೋಂಕಿತರಿಗೆ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಎಚ್‌ಐವಿ ಸೋಂಕಿತ ವ್ಯಕ್ತಿಯನ್ನು ಮಾನವೀಯ ನೆಲೆಗಟ್ಟಿನಲ್ಲಿ ನೋಡಬೇಕು. ಯಾವುದೇ ತಾರತಮ್ಯ ಮಾಡಬಾರದು ಎಲ್ಲರಂತೆ ಬದುಕಲು ಅವಕಾಶ ನೀಡಬೇಕು ಎಂದು ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ವಿ ಮಹೇಶ್‌ ತಿಳಿಸಿದರು. ಎಚ್‌ಐವಿ ಹರಡದಂತೆ ತಡೆಯಬೇಕಾದರೆ ಸ್ವಯಂ ನಿಯಂತ್ರಣ ಅಗತ್ಯ. ಸುರಕ್ಷಿತವಲ್ಲದ ಲೈಂಗಿಕ ಸಂಪರ್ಕ, ಸಂಸ್ಕರಿಸಿದ ಸಿರಿಂಜ್ ಮೂಲಕ ಮಾದಕ ದ್ರವ್ಯ ತೆಗೆದುಕೊಳ್ಳುವುದರಿಂದ ಹೆಚ್‌ಐವಿ ಹರಡುತ್ತದೆ. ಗರ್ಭಿಣಿಯರಲ್ಲಿ ಎಚ್‌ಐವಿ ಇದ್ದರೆ ಹುಟ್ಟುವ ಮಗುವಿಗೆ ಹರಡದಂತೆ ತಡೆಯುವ ನಿಟ್ಟಿನಲ್ಲಿ ಚಿಕಿತ್ಸೆ ನೀಡಲಾಗುವುದು ಎಂದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಎಚ್‌ಐವಿ ಹರಡದಂತೆ ತಡೆಯಬೇಕಾದರೆ ಸ್ವಯಂ ನಿಯಂತ್ರಣ ಅಗತ್ಯ ಎಂದು ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ವಿ ಮಹೇಶ್ ಹೇಳಿದರು.

ಪಟ್ಟಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಏಡ್ಸ್ ಜನ ಜಾಗೃತಿ ಆಂದೋಲನದ ಸಹಯೋಗದಲ್ಲಿ ಏರ್ಪಡಿಸಿದ್ದ ಏಡ್ಸ್ ತಡೆಗಟ್ಟುವ ನಿಟ್ಟಿನಲ್ಲಿ ಜಾನಪದ ಕಲಾತಂಡದಿಂದ ಬೀದಿ ನಾಟಕದ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸುರಕ್ಷಿತವಲ್ಲದ ಲೈಂಗಿಕ ಸಂಪರ್ಕ, ಸಂಸ್ಕರಿಸಿದ ಸಿರಿಂಜ್ ಮೂಲಕ ಮಾದಕ ದ್ರವ್ಯ ತೆಗೆದುಕೊಳ್ಳುವುದರಿಂದ ಹೆಚ್‌ಐವಿ ಹರಡುತ್ತದೆ. ಗರ್ಭಿಣಿಯರಲ್ಲಿ ಎಚ್‌ಐವಿ ಇದ್ದರೆ ಹುಟ್ಟುವ ಮಗುವಿಗೆ ಹರಡದಂತೆ ತಡೆಯುವ ನಿಟ್ಟಿನಲ್ಲಿ ಚಿಕಿತ್ಸೆ ನೀಡಲಾಗುವುದು ಎಂದರು.

ಎಚ್‌ಐವಿ ಸೋಂಕಿತರಿಗೆ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಎಚ್‌ಐವಿ ಸೋಂಕಿತ ವ್ಯಕ್ತಿಯನ್ನು ಮಾನವೀಯ ನೆಲೆಗಟ್ಟಿನಲ್ಲಿ ನೋಡಬೇಕು. ಯಾವುದೇ ತಾರತಮ್ಯ ಮಾಡಬಾರದು ಎಲ್ಲರಂತೆ ಬದುಕಲು ಅವಕಾಶ ನೀಡಬೇಕು ಎಂದು ತಿಳಿಸಿದರು.

ಐಸಿಟಿಸಿ ಆಪ್ತ ಸಮಾಲೋಚಕ ಕೆಂಚೇಗೌಡ ಮಾತನಾಡಿ, ಎಚ್‌ಐವಿ ಕುರಿತು ಜಾಗೃತಿ ಉಂಟು ಮಾಡಲು ತಾಲೂಕಿನಲ್ಲಿ ಗುರುವಾರದಿಂದ ಆರು ದಿನ ಬೀದಿ ನಾಟಕ ಪ್ರದರ್ಶಿಸಲಾಗುವುದು ಎಂದು ತಿಳಿಸಿದರು.

ಆಸ್ಪತ್ರೆಯ ತಾಂತ್ರಿಕ ಅಧಿಕಾರಿ ವೀಣಾ, ಭೂಮಿ ಉಳಿಸಿ ಕ್ಷೇಮಾಭಿವೃದ್ಧಿ ಸಂಘದ ಮಾಜಿ ಅಧ್ಯಕ್ಷ ರಾಜಕುಮಾರ್‌, ಸರ್ಕಾರಿ ಆಸ್ಪತ್ರೆಯ ತಾಂತ್ರಿಕ ಸಿಬ್ಬಂದಿ ಗುರುಮೂರ್ತಿ, ಗಿರಿಜಾ ಭಾಗವಹಿಸಿದ್ದರು.