ಸಾರಾಂಶ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಲಕಾವೇರಿ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಸ್ವ ಉದ್ಯೋಗದ ಮಹಿಳೆಯರಿಗೆ ಮಾಹಿತಿ ಕಾರ್ಯಾಗಾರ ನಡೆಯಿತು. 
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಲಕಾವೇರಿ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಸ್ವ ಉದ್ಯೋಗದ ಮಹಿಳೆಯರಿಗೆ ಮಾಹಿತಿ ಕಾರ್ಯಾಗಾರವನ್ನು ನಡೆಸಲಾಯಿತು. ಭಾನುವಾರ ಮಂಜಿಕೇರೆ ಸಮುದಾಯಭವನದಲ್ಲಿ ಕಾನ್‌ಬೈಲ್ ಒಕ್ಕೂಟದ ತಲಕಾವೇರಿ ಜ್ಞಾನ ವಿಕಾಸ ಮಾಹಿತಿ ಕಾರ್ಯಾಗಾರವನ್ನು ತಾಲೂಕು ಯೋಜನಾಧಿಕಾರಿ ಪುರುಷೋತ್ತಮ್ ಉದ್ಘಾಟಿಸಿ ಮಾತನಾಡಿದರು. ಮುಂದಿನ ಸ್ವಾವಲಂಬಿ ಬದುಕಿಗಾಗಿ ಮಹಿಳೆಯರಿಗೆ ಹೊಲಿಗೆ ತರಬೇತಿಯನ್ನು ಆರಂಭಿಸಲಾಗುತ್ತಿದ್ದು, ಇದರ ಸದುಪಯೋಗವನ್ನು ಆಸಕ್ತ ಸದಸ್ಯರು ಪಡೆದುಕೊಳ್ಳುವಂತೆ ಕರೆ ನೀಡಿದರು. ತಲಕಾವೇರಿ ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಮಾಲಿನಿ ಅವರು ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ಕಾನ್‌ಬೈಲ್ ಒಕ್ಕೂಟದ ಮಾಜಿ ಅಧ್ಯಕ್ಷೆ ಖತ್ತೀಜ ವಹಿಸಿದ್ದರು. ಶ್ರೀ ಕ್ಷೇತ್ರ ಧ.ಗ್ರಾ.ಯೋ. ಸೇವಾ ಪ್ರತಿನಿಧಿ ಯಶೋಧ ಮತ್ತಿತರರು ಇದ್ದರು.ಭೂಮಿಕಾ ಸಂಘದ ಪದಾಧಿಕಾರಿ ಅಶ್ವಿನಿ ಸ್ವಾಗತಿಸಿ, ಹಾಜಿರ ನಿರೂಪಿಸಿ ವಂದಿಸಿದರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))