ಪು2...ಮಹಿಳೆಯರ ಸ್ವಾಭಿಮಾನ ಬದುಕಿಗೆ ಸಹಕಾರಿ

| Published : Mar 04 2024, 01:18 AM IST

ಸಾರಾಂಶ

ಅಮೀನಗಡ: ಮಹಿಳೆಯರ ಸರ್ವತೋಮುಖ ಹಾಗೂ ಸ್ವಾಭಿಮಾನದ ಬದುಕಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸಂಪೂರ್ಣ ಸಹಕರಿಸುತ್ತಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕ ಗಣೇಶ ಬಿ. ಹೇಳಿದರು.

ಕನ್ನಡಪ್ರಭವಾರ್ತೆ ಅಮೀನಗಡ

ಮಹಿಳೆಯರ ಸರ್ವತೋಮುಖ ಹಾಗೂ ಸ್ವಾಭಿಮಾನದ ಬದುಕಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಸಂಪೂರ್ಣ ಸಹಕರಿಸುತ್ತಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕ ಗಣೇಶ ಬಿ. ಹೇಳಿದರು.

ಪಟ್ಟಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಹುನಗುಂದ ಸಹಯೋಗದಲ್ಲಿ ಅಮೀನಗಡ ವಲಯ ಆರೋಗ್ಯ ಮತ್ತು ಹಿಡುವಳಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹುನಗುಂದ ತಾಲೂಕಿನಲ್ಲಿ ಸ್ವಸಹಾಯ ಸಂಘದ ಸದಸ್ಯರಿಗೆ ಆಕಸ್ಮಿಕವಾಗಿ ಬರುವ ಆರೋಗ್ಯ ಸಮಸ್ಯೆಗಳಿಗೆ ಅವರು ಮತ್ತು ಅವರ ಕುಟುಂಬದವರ ಆರೋಗ್ಯ ರಕ್ಷಣೆಗಳಿಗೆ ಯೋಜನೆಯ ಮೂಲಕ ಅನುಷ್ಠಾನಗೊಂಡಿರುವ ಕಾರ್ಯಕ್ರಮದಡಿಯಲ್ಲಿ ಪ್ರಸ್ತುತ ಆರ್ಥಿಕ ವರ್ಷದಲ್ಲಿ ತಾಲೂಕಿನ 223 ಕುಟುಂಬಗಳಿಗೆ ₹ 28,47,500 ಸೌಲಭ್ಯ ಒದಗಿಸಲಾಗಿದೆ. ಸ್ವಸಹಾಯ ಸಂಘದ ಸದಸ್ಯರು ಬ್ಯಾಂಕುಗಳಿಂದ ಪಡೆಯುವ ಸಾಲಕ್ಕೆ ಜೀವ ಭದ್ರತೆಗಾಗಿ ₹ 3,58,4700 ಪ್ರಗತಿ ರಕ್ಷಾ ಕವಚ ವಿಮಾ ಮಾಡಲಾಗಿದೆ. ತಾಲೂಕಿನಲ್ಲಿ ವಿವಿಧ ಕಾರ್ಯಕ್ರಮ ಅನುಷ್ಠಾನಗೊಂಡು ಕಾರ್ಯಕ್ಷಮತೆ ಮೆರೆದಿದೆ. ಸಂಘದ ಸದಸ್ಯರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಜಿಲ್ಲಾ ನಿರ್ದೇಶಕ ಕೃಷ್ಣಾ ಟಿ. ತಾಲೂಕು ಯೋಜನಾಧಿಕಾರಿ ಸಂತೋಷ, ಪವಿತ್ರ ಹಾಗೂ ಒಕ್ಕೂಟದ ಅಧ್ಯಕ್ಷ, ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಸ್ವಸಹಾಯ ಸೇವಾ ಪ್ರತಿನಿಧಿಗಳು ಭಾಗವಹಿಸಿದ್ದರು.