ಯುವಕ-ಯುವತಿಯರಿಗೆ ಸ್ವಉದ್ಯೋಗ ತರಬೇತಿ ನೀಡುವ ಮೂಲಕ ಉದ್ಯೋಗಾವಕಾಶಗಳನ್ನು ಸೃಷ್ಟಿಸಿ, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪ್ರೋತ್ಸಾಹಿಸುತ್ತಿದೆ ಎಂದು ತಿಳಿಸಿದರು. ರೈತರ ಹಿತದೃಷ್ಟಿಯಿಂದ ರಾಜ್ಯದ ವಿವಿಧ ಭಾಗಗಳಲ್ಲಿ 1 ಸಾವಿರಕ್ಕೂ ಹೆಚ್ಚು ಕೆರೆಗಳನ್ನು ಪುನರ್‌ನಿರ್ಮಾಣ ಮಾಡುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸಲು ಯೋಜನೆ ಕೈಗೊಂಡಿರುವುದು ಶ್ಲಾಘನೀಯವಾಗಿದೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ನೀರಿನ ಲಭ್ಯತೆ ಹೆಚ್ಚುವ ಜೊತೆಗೆ ರೈತರ ಜೀವನಮಟ್ಟ ಸುಧಾರಣೆಗೆ ಸಹಕಾರಿಯಾಗುತ್ತಿದೆ ದಿಡಗ ವಲಯದ ಪುರ, ಹಾಗೂ ಬೆಳಗಳ್ಳಿ ಕೆರೆಗಳನ್ನು ಪುನಶ್ಚೇತನಗಳಿಸಲಾಗಿದೆ ಎಂದರು.

ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯದ ಲಕ್ಷಾಂತರ ಬಡ ಕುಟುಂಬಗಳು ಸ್ವಾವಲಂಬಿ ಜೀವನ ಕಟ್ಟಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರುತ್ತಿವೆ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ಹೇಳಿದರು.ಹೋಬಳಿಯ ಚಿನ್ನೇನಹಳ್ಳಿ ಗ್ರಾಮದಲ್ಲಿ ದಿಡಗ ವಲಯದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಅಕ್ಕನಹಳ್ಳಿ ಬಿ. ಕಾರ್ಯಕ್ಷೇತ್ರದ ವತಿಯಿಂದ ಆಯೋಜಿಸಿದ್ದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ದೇವಿ ಪೂಜೆ ಹಾಗೂ ಕುಂಕುಮಾರ್ಚನೆ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕೇವಲ ಆರ್ಥಿಕ ನೆರವಿಗೆ ಸೀಮಿತವಾಗದೆ ಗ್ರಾಮೀಣ ಜನರ ಸಾಮಾಜಿಕ, ಆರ್ಥಿಕ ಹಾಗೂ ಆರೋಗ್ಯ ಕ್ಷೇತ್ರಗಳ ಸುಧಾರಣೆಗೆ ಮಹತ್ವದ ಕೊಡುಗೆ ನೀಡುತ್ತಿದೆ. ಯುವಕ-ಯುವತಿಯರಿಗೆ ಸ್ವಉದ್ಯೋಗ ತರಬೇತಿ ನೀಡುವ ಮೂಲಕ ಉದ್ಯೋಗಾವಕಾಶಗಳನ್ನು ಸೃಷ್ಟಿಸಿ, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪ್ರೋತ್ಸಾಹಿಸುತ್ತಿದೆ ಎಂದು ತಿಳಿಸಿದರು. ರೈತರ ಹಿತದೃಷ್ಟಿಯಿಂದ ರಾಜ್ಯದ ವಿವಿಧ ಭಾಗಗಳಲ್ಲಿ 1 ಸಾವಿರಕ್ಕೂ ಹೆಚ್ಚು ಕೆರೆಗಳನ್ನು ಪುನರ್‌ನಿರ್ಮಾಣ ಮಾಡುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸಲು ಯೋಜನೆ ಕೈಗೊಂಡಿರುವುದು ಶ್ಲಾಘನೀಯವಾಗಿದೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ನೀರಿನ ಲಭ್ಯತೆ ಹೆಚ್ಚುವ ಜೊತೆಗೆ ರೈತರ ಜೀವನಮಟ್ಟ ಸುಧಾರಣೆಗೆ ಸಹಕಾರಿಯಾಗುತ್ತಿದೆ ದಿಡಗ ವಲಯದ ಪುರ, ಹಾಗೂ ಬೆಳಗಳ್ಳಿ ಕೆರೆಗಳನ್ನು ಪುನಶ್ಚೇತನಗಳಿಸಲಾಗಿದೆ ಎಂದರು.ಮದ್ಯಪಾನದ ದುಷ್ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ 2 ಸಾವಿರಕ್ಕೂ ಅಧಿಕ ಮಧ್ಯವರ್ಜನ ಶಿಬಿರಗಳನ್ನು ಆಯೋಜಿಸಲಾಗಿದೆ. ಈ ಶಿಬಿರಗಳ ಮೂಲಕ 2 ಲಕ್ಷಕ್ಕೂ ಹೆಚ್ಚು ಜನರು ಮದ್ಯಪಾನದಿಂದ ಮುಕ್ತರಾಗಿ, ಆರೋಗ್ಯಕರ ಹಾಗೂ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಿದೆ. ಜನಜಾಗೃತಿ ವೇದಿಕೆಯ ಕಾರ್ಯವೂ ಈ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಿದೆ ತಾಲೂಕು ಕೇಂದ್ರದಲ್ಲಿ ಆಯೋಜಿಸಿದ್ದ ಮಧ್ಯವರ್ಜನ ಶಿಬಿರ ಯಶಸ್ವಿಯಾಗಲು ಸಹಕಾರ ನೀಡಿದ್ದೆ ಎಂದು ತಿಳಿಸಿದರು. ಗ್ರಾಮೀಣ ಪ್ರದೇಶಗಳ ಬಡ ಕುಟುಂಬಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಲ್ಲಿಯೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವೆ ಗಮನಾರ್ಹವಾಗಿದೆ. 5 ಲಕ್ಷಕ್ಕೂ ಹೆಚ್ಚು ಶೌಚಾಲಯಗಳ ನಿರ್ಮಾಣ ಹಾಗೂ 80 ಸಾವಿರಕ್ಕೂ ಅಧಿಕ ಸೌರ ವಿದ್ಯುತ್ ಸಂಪರ್ಕಗಳ ಸ್ಥಾಪನೆ ಮೂಲಕ ಪರಿಸರ ಸಂರಕ್ಷಣೆ, ಸ್ವಚ್ಛತೆ ಮತ್ತು ಗ್ರಾಮೀಣ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದರು.ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಜನರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದೆ. ಸಮಾಜದ ದುರ್ಬಲ ವರ್ಗಗಳ ಅಭಿವೃದ್ಧಿ, ಮಹಿಳೆಯರ ಸಬಲೀಕರಣ, ಯುವಕರಿಗೆ ಉದ್ಯೋಗಾವಕಾಶ ಮತ್ತು ಗ್ರಾಮಗಳ ಮೂಲಸೌಕರ್ಯ ಅಭಿವೃದ್ಧಿಗೆ ಸಂಸ್ಥೆಯ ಕೊಡುಗೆ ಅಪಾರವಾಗಿದೆ ಎಂದು ಅವರು ಶ್ಲಾಘಿಸಿದರು.ಕಾರ್ಯಕ್ರಮದಲ್ಲಿ ಮಹಿಳೆಯರು ಸಾಮೂಹಿಕವಾಗಿ ಶ್ರೀ ವರಮಹಾಲಕ್ಷ್ಮಿ ದೇವಿಯ ಪೂಜೆ ಹಾಗೂ ಕುಂಕುಮಾರ್ಚನೆಯಲ್ಲಿ ಭಾಗವಹಿಸಿ ಧಾರ್ಮಿಕ ಶ್ರದ್ಧೆ ಮೆರೆದರು. ಗ್ರಾಮಸ್ಥರು ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಸತೀಶ್ ಸುವರ್ಣ, ಯೋಜನಾಧಿಕಾರಿ ಕುಸುಮದಾರ್‌, ಪೂಜಾ ಸಮಿತಿಯ ಅಧ್ಯಕ್ಷ ರಮೇಶ್, (ರಾಮು) ಉಪನ್ಯಾಸಕಿ ರೂಪಶ್ರೀ, ಪಿಎಸ್ಐ ರೂಪದೇವಿ, ಪಿಡಿಒ ಸುರೇಶ್, ಮೇಲ್ವಿಚಾರಕ ಹರೀಶ್, ಮುಖಂಡರಾದ ಜಯರಾಮ್, ಇಂದ್ರಜಿತ್, ಮಲ್ಲೇಗೌಡ, ಬಿಳಿಕೆರೆ ರಂಗೆಗೌಡ, ವೀರಭದ್ರಪ್ಪ, ಸಂಪತ್ ಕುಮಾರ್, ಪೂರ್ಣಿಮಾ, ವಿಶಾಲ, ಶಿವಕುಮಾರ್, ಸುರೇಶ್, ವಾಸು, ಇತರರು ಹಾಜರಿದ್ದರು.