ಸಾರಾಂಶ
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳಾದ ಜಯಪ್ರಕಾಶ್ ಹೆಗ್ಡೆ ಪರವಾಗಿ ನಗರದ ಬೈಲೂರು ವಾರ್ಡಿನ ಹಿರಿಯ ಕಾಂಗ್ರೆಸ್ ನಾಯಕರಾದ ಇಂಧು ರಮಾನಂದ ಭಟ್ ಅವರ ನಿವಾಸದಲ್ಲಿ ಕಾರ್ಯಕರ್ತರ ಸಭೆ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳಾದ ಜಯಪ್ರಕಾಶ್ ಹೆಗ್ಡೆ ಪರವಾಗಿ ನಗರದ ಬೈಲೂರು ವಾರ್ಡಿನ ಹಿರಿಯ ಕಾಂಗ್ರೆಸ್ ನಾಯಕರಾದ ಇಂಧು ರಮಾನಂದ ಭಟ್ ಅವರ ನಿವಾಸದಲ್ಲಿ ಕಾರ್ಯಕರ್ತರ ಸಭೆ ನಡೆಯಿತು.ಈ ಸಂದರ್ಭ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷೆ ಜ್ಯೋತಿ ಹೆಬ್ಬಾರ್ ಅವರು ಸಭೆಯನ್ನುದ್ದೇಶಿಸಿ, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ನುಡಿದಂತೆ ನಡೆದಿದ್ದು, ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರಿಗೆ ಬಹಳ ಲಾಭವಾಗಿದೆ. ಗೃಹಲಕ್ಷ್ಮೀ ಯೋಜನೆಯಿಂದ ತಿಂಗಳಿಗೆ 2,000 ರು. ಸಾಕಷ್ಟು ಮಹಿಳೆಯರಿಗೆಗೆ ತಮ್ಮ ತಿಂಗಳ ಖರ್ಚು ನಿಭಾಯಿಸಲು ಸಹಕಾರಿಯಾಗಿದೆ. ಗೃಹಜ್ಯೋತಿ ಯೋಜನೆಯಿಂದ ಹೆಚ್ಚಿನ ಕುಟುಂಬಗಳ ಯಜಮಾನರಿಗೆ ಪ್ರತಿ ತಿಂಗಳು ಹಣ ಉಳಿತಾಯವಾಗುತ್ತಿದೆ. ಶಕ್ತಿ ಯೋಜನೆಯಿಂದ ಮಹಿಳೆಯರು ಕರ್ನಾಟಕದಾದ್ಯಂತ ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿ ತಮಗೆ ಇಷ್ಟವಾದ ಹಲವಾರು ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ಸರ್ಕಾರವು ಬಡವರಿಗೆ ಸ್ವಾವಲಂಬಿ ಬದುಕು ಕಟ್ಟಲು ಸಹಕಾರಿಯಾಗಿದೆ ಎಂದು ಹೇಳಿದರು.
ಈ ಸಭೆಯಲ್ಲಿ ಅಭ್ಯರ್ಥಿಗಳಾದ ಜಯಪ್ರಕಾಶ್ ಹೆಗ್ಡೆ ಅವರ ಪುತ್ರಿ ದಿವ್ಯಾ, ಪಕ್ಷದ ನಾಯಕರಾದ ಮಹಾಬಲ ಕುಂದರ್, ಹರೀಶ್ ಕಿಣಿ, ಮೀನಾಕ್ಷಿ ಮಾಧವ ಬನ್ನಂಜೆ, ಯುವರಾಜ್ ಪುತ್ತೂರು, ಅಮೃತ್ ಶೆಣೈ, ಸಂಧ್ಯಾ ತಿಲಕ್‌ರಾಜ್, ಸುರೇಶ್ ಶೆಟ್ಟಿ ಬನ್ನಂಜೆ, ಗಣೇಶ್ ನೆರ್ಗಿ, ಶಶಿರಾಜ್ ಕುಂದರ್, ಕೃಷ್ಣ ಹೆಬ್ಬಾರ್ ಹಾಗೂ ಇನ್ನಿತರ ಮುಖಂಡರು ಕಾರ್ಯಕರ್ತರು ಭಾಗವಹಿಸಿ ಅಭಿವೃದ್ಧಿಯ ಹರಿಕಾರರಾದ ಜಯಪ್ರಕಾಶ್ ಹೆಗ್ಡೆ ಅವರ ಪರವಾಗಿ ಮತಯಾಚನೆ ಮಾಡಲಾಯಿತು.