ಸ್ವಾವಲಂಬನೆ ಪಂಚಗ್ಯಾರಂಟಿ ಪೂರಕ

| Published : Jan 18 2025, 12:45 AM IST

ಸಾರಾಂಶ

ಪಂಚಗ್ಯಾರಂಟಿ ಯೋಜನೆಗಳು ಬಡವರ ಬದುಕಿಗೆ ಜತೆಗೆ ಸ್ವಾವಲಂಬಿ ಜೀವನ ನಿರ್ವಹಿಸಲು ಸಹಕಾರಿಯಾಗಿವೆ ಎಂದು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸುರೇಶ ಹಾರಿವಾಳ ಹೇಳಿದರು.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ಪಂಚಗ್ಯಾರಂಟಿ ಯೋಜನೆಗಳು ಬಡವರ ಬದುಕಿಗೆ ಜತೆಗೆ ಸ್ವಾವಲಂಬಿ ಜೀವನ ನಿರ್ವಹಿಸಲು ಸಹಕಾರಿಯಾಗಿವೆ ಎಂದು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸುರೇಶ ಹಾರಿವಾಳ ಹೇಳಿದರು.

ತಾಲೂಕಿನ ಮನಗೂಳಿ ಪಟ್ಟಣದ ಸೋಮೇಶ್ವರ ಭಜನಾ ಮಂಟಪದಲ್ಲಿ ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಗುರುವಾರ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಕಾಂಗ್ರೆಸ್ ಸರ್ಕಾರವು ಸಮಾಜದ ಹಿಂದುಳಿದ ವರ್ಗದ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಅವರ ಜೀವನಮಟ್ಟ ಸುಧಾರಿಸಲು ಹಲವಾರು ಜನಪರ ಯೋಜನೆ ಜಾರಿ ಮಾಡಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿದೆ. ಈ ಕಾರ್ಯಕ್ಕೆ ಬೆಂಬಲವಾಗಿ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ, ಶಕ್ತಿ ಯೋಜನೆಗಳು ಸಹಕಾರಿಯಾಗಿವೆ. ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಯೋಜನೆಗಳು ಸಮರ್ಪಕವಾಗಿ ಬಳಕೆಯಾಗುವಂತೆ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.ಎಪಿಎಂಸಿ ಮಾಜಿ ಅಧ್ಯಕ್ಷ ವಿಶ್ವನಾಥ ಪಾಟೀಲ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಶಿವನಗೌಡ ಗುಜಗೊಂಡ, ಪಟ್ಟಣ ಪಂಚಾಯತಿ ಸದಸ್ಯ ಭಾಗ್ಯರಾಜ ಸೊನ್ನದ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ದೇಸಾಯಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕಾಧ್ಯಕ್ಷ ಮಹಿಬೂಬ್‌ ನಾಯ್ಕೋಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಿರಸ್ತೇದಾರ ಎಂ.ಡಿ.ಬಳಗಾನೂರ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಮಹಾಂತೇಶ ತಳೇವಾಡ, ಶಂಕರ ಚಕ್ರಮನಿ, ಮಲ್ಲನಗೌಡ ಕೋಳೂರು, ಸಲೀಂ ನಾಗಠಾಣ,ಪಂಚಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಅಧಿಕಾರಿಗಳು ಇದ್ದರು. ಇದೇ ಸಂದರ್ಭದಲ್ಲಿ ವಿವಿಧ ಫಲಾನುಭವಿಗಳಿಂದ ಅಹವಾಲು ಸ್ವೀಕರಿಸಿ ಪರಿಹಾರ ನೀಡಲಾಯಿತು.