ಸಾರಾಂಶ
ಕನ್ನಡಪ್ರಭ ವಾರ್ತೆ ನಂಜನಗೂಡು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿ ದೇಶವನ್ನಾಗಿ ರೂಪಿಸಿದ ಕೀರ್ತಿ ಡಾ. ಬಾಬು ಜಗಜೀವನರಾಂ ಅವರಿಗೆ ಸಲ್ಲುತ್ತದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆಯ ಸಮಿತಿಯಿಂದ ಪಟ್ಟಣದ ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿ ಏರ್ಪಡಿಸಿದ್ದ ಡಾ. ಬಾಬು ಜಗಜೀವನ ರಾಂ ಅವರ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜ ಸುಧಾರಣೆ ಹಾಗೂ ಎಲ್ಲರೂ ಸಮಾನವಾಗಿ ಜೀವನ ನಡೆಸಬೇಕು ಎನ್ನುವ ಮಹತ್ವಾಕಾಂಕ್ಷೆಯನ್ನು ಬಾಬು ಜಗಜೀವನರಾಂ ಅವರು ಹೊಂದಿದ್ದರು. ಅಲ್ಲದೆ ಕಾರ್ಮಿಕರ ಏಳಿಗೆಯನ್ನು ಸದಾ ಬಯಸುತ್ತಿದ್ದರು. ಅವರು ರಕ್ಷಣಾ ಮಂತ್ರಿಯಾಗಿದ್ದಾಗ ಅವರ ಶ್ರಮದ ಫಲವಾಗಿ ಭಾರತ ದೇಶ ಪಾಕಿಸ್ತಾನದ ಜೊತೆಗೆ ನಡೆದ ಯುದ್ಧದಲ್ಲಿ ಜಯಿಸಿ ಬಾಂಗ್ಲಾದೇಶದ ಉದಯಕ್ಕೆ ಕಾರಣವಾಯಿತು ಎಂದರು.ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ಡಾ. ಬಾಬು ಜಗಜೀವನರಾಂ ಅವರು ಡಾ.ಬಿ.ಆರ್. ಅಂಬೇಡ್ಕರ್ ಅವರಂತೆ ಶೋಷಣೆಯನ್ನು ಅನುಭವಿಸಿ, ಶೋಷಣೆ, ಜಾತಿ ತಾರತಮ್ಯದ ವಿರುದ್ಧ ಧೈರ್ಯವಾಗಿ ಹೋರಾಟ ನಡೆಸಿ ಸಮಾಜ ಸುಧಾರಣೆಗೆ ಶ್ರಮಿಸಿದ್ದಾರೆ ಎಂದುರ ತಿಳಿಸಿದರು.ವಿಧಾನ ಪರಿಷತ್ ಸದಸ್ಯ ಡಾ. ತಿಮ್ಮಯ್ಯ ಮಾತನಾಡಿ, ಬಾಬು ಜಗಜೀವನರಾಂ ಅವರು ದೇಶ ಕಂಡ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಹಾಗೂ ದಕ್ಷ ಆಡಳಿತಗಾರರಾಗಿದ್ದರು ಎಂದರು.ಇದಕ್ಕೂ ಮುನ್ನ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಿಂದ ವಿವಿಧ ಜಾನಪದ ಕಲಾತಂಡಗಳೊಂದಿಗೆ ಡಾ. ಬಾಬು ಜಗಜೀವನರಾಂ ರವರ ಭಾವಚಿತ್ರವನ್ನು ಅದ್ಧೂರಿಯಾಗಿ ಮೆರವಣಿಗೆ ಮಾಡಲಾಯಿತು.ಶ್ರೀನಿವಾಸ ಮೂರ್ತಿ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ, ಉಪಾಧ್ಯಕ್ಷ ಹರಿಯಾನ ಬಾನು, ಸದಸ್ಯರಾದ ವಿಜಯಲಕ್ಷ್ಮಿ ಕುಮಾರ್, ಮಂಗಳಮ್ಮ, ಯೋಗೀಶ್, ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ಮುಖಂಡರಾದ ದೇವರಾಜು, ಶ್ರೀನಿವಾಸ್, ಸ್ವಾಮಿ, ಮಧುರಾಜ್, ಸುಂದರರಾಜು, ಅರೂರಪ್ಪ, ನಾರಾಯಣಸ್ವಾಮಿ, ಆನಂದ್, ಸಿದ್ದಪ್ಪ, ಚಂದ್ರು, ಸ್ವಾಮಿ, ದಸಂಸ ಸಂಚಾಲಕರಾದ ಮಲ್ಲೇಶ್, ನಾರಾಯಣ, ಕಾರ್ಯ ಬಸವಣ್ಣ, ತಹಸೀಲ್ದಾರ್ ಶಿವಕುಮಾರ್ ಕಾಸ್ನೂರು, ಡಿವೈಎಸ್ಪಿ ರಘು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗ ಇದ್ದರು.