ರಾಮನಗರದಲ್ಲಿ ಸ್ವಾತಂತ್ರ್ಯ ದಿನಕ್ಕೆ ಹರ್‌ ಘರ್‌ ತಿರಂಗಾಗೆ ಜಿಲ್ಲಾಧಿಕಾರಿಗಳಿಂದ ಸೆಲ್ಫಿ ಪಾಯಿಂಟ್‌ಗೆ ಚಾಲನೆ

| Published : Aug 15 2024, 01:45 AM IST

ರಾಮನಗರದಲ್ಲಿ ಸ್ವಾತಂತ್ರ್ಯ ದಿನಕ್ಕೆ ಹರ್‌ ಘರ್‌ ತಿರಂಗಾಗೆ ಜಿಲ್ಲಾಧಿಕಾರಿಗಳಿಂದ ಸೆಲ್ಫಿ ಪಾಯಿಂಟ್‌ಗೆ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಹರ್ ಘರ್ ತಿರಂಗ ಅಭಿಯಾನದಡಿ ರಾಮನಗರ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿ ಅಳವಡಿಸಲಾಗಿರುವ ಸೆಲ್ಫಿ ಪಾಯಿಂಟ್‌ಗೆ ಬುಧವಾರ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ಸೆಲ್ಫಿ ತೆಗೆದುಕೊಳ್ಳುವ ಮೂಲಕ ಚಾಲನೆ ನೀಡಿದರು.

ರಾಮನಗರ: ಹರ್ ಘರ್ ತಿರಂಗ ಅಭಿಯಾನದಡಿ ರಾಮನಗರ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿ ಅಳವಡಿಸಲಾಗಿರುವ ಸೆಲ್ಫಿ ಪಾಯಿಂಟ್‌ಗೆ ಬುಧವಾರ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ಸೆಲ್ಫಿ ತೆಗೆದುಕೊಳ್ಳುವ ಮೂಲಕ ಚಾಲನೆ ನೀಡಿದರು.

ಸೆಲ್ಫಿ ಪಾಯಿಂಟ್‌ಗಳನ್ನು ರಾಮನಗರ ಜಿಲ್ಲಾಧಿಕಾರಿಗಳ ಕಚೇರಿ, ರಾಮನಗರ ಬಸ್ ನಿಲ್ದಾಣ, ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನ, ಚನ್ನಪಟ್ಟಣ ಬಸ್ ನಿಲ್ದಾಣ, ರಾಮದೇವರ ಬೆಟ್ಟ, ಸಂಗಮ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ, ಕನಕಪುರ ಬಸ್ ನಿಲ್ದಾಣದಲ್ಲಿ ಅಳವಡಿಸಲಾಗಿದೆ.

ಹರ್ ಘರ್ ತಿರಂಗ ಅಭಿಯಾನದಡಿ ರಾಮನಗರ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿ ಅಳವಡಿಸಲಾಗಿರುವ ಸೆಲ್ಫಿ ಪಾಯಿಂಟ್‌ಗೆ ಬುಧವಾರ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಸೆಲ್ಫಿ ತೆಗೆದುಕೊಳ್ಳುವ ಮೂಲಕ ಚಾಲನೆ ನೀಡಿದರು.ಕನ್ನಡ ಜ್ಯೋತಿ ರಥಯಾತ್ರೆಗೆ ಜಿಲ್ಲಾಧಿಕಾರಿಗಳಿಂದ ಚಾಲನೆ

ರಾಮನಗರ: ಕರ್ನಾಟಕ ಸಂಭ್ರಮ-50 ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ಅಂಗವಾಗಿ ಕನ್ನಡ ಜ್ಯೋತಿ ರಥಯಾತ್ರೆಗೆ ನಗರದ ರಾಯರದೊಡ್ಡಿ ಬಳಿಯಿರುವ ಶ್ರೀ ಭುವನೇಶ್ವರಿ ದೇವಸ್ಥಾನ ಬಳಿ ಕನ್ನಡ ಜ್ಯೋತಿ ರಥಯಾತ್ರೆಗೆ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಬುಧವಾರ ಚಾಲನೆ ನೀಡಿದರು.

ಕನ್ನಡ ಜ್ಯೋತಿ ರಥಯಾತ್ರೆಯು ನಗರದ ರಾಯರದೊಡ್ಡಿ ವೃತ್ತ, ಬಸ್ ನಿಲ್ದಾಣ ವೃತ್ತ, ಹಳೆ ಬಸ್ ನಿಲ್ದಾಣ ವೃತ್ತ, ಹಾಗೂ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು ನಂತರ ಬಿ.ಎಂ.ರಸ್ತೆ ಮೂಲಕ ಹಾರೋಹಳ್ಳಿಗೆ ಕನ್ನಡ ಜ್ಯೋತಿ ರಥಯಾತ್ರೆಯನ್ನು ಬಿಳ್ಕೋಡಲಾಯಿತು.

ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ, ಉಪವಿಭಾಗಾಧಿಕಾರಿ ಬಿನೋಯ್, ರಾಮನಗರ ತಾಲ್ಲೂಕು ತಹಶೀಲ್ದಾರ್ ತೇಜಸ್ವಿನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ. ಸತೀಶ್ ಹಾಗೂ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು, ಉಪಸ್ಥಿತರಿದ್ದರು.