ಸಾರಾಂಶ
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ ಸ್ಥಾಪಿಸಲಾಗಿರುವ ಹರ್ ಘರ್ ತಿರಂಗಾ ಸೆಲ್ಫಿ ಸ್ಪಾಟ್‌ಗಳು ಜನರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿವೆ. ಸೆಲ್ಫಿ ಕ್ಲಿಕ್ಕಿಸಿಕೊಂಡವರಿಗೆ ಪ್ರಮಾಣಪತ್ರವನ್ನೂ ನೀಡಲಾಗುತ್ತಿದೆ.
ಚಿಕ್ಕಬಳ್ಳಾಪುರ: ಭಾರತಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಒಂದು ವಾರಗಳ ಕಾಲ ಸ್ವಾತಂತ್ರೋತ್ಸವದ ಬಗ್ಗೆ ಅರಿವು ಮೂಡಿಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದ ಹರ್ ಘರ್ ತಿರಂಗ ಅಭಿಯಾನಕ್ಕೆ ಎಲ್ಲ ಕಡೆ ಸೈಕಲ್ ಜಾಥಾ ,ಬೈಕ್ ರ್‍ಯಾಲಿ,ಮ್ಯಾರಾಥಾನ್ ಓಟ ಹಮ್ಮಿಕೊಂಡಿದ್ದರೆ, ಕೆಎಸ್ಆರ್ ಟಿಸಿ ಬಸ್ ನಿಲ್ದಾಣಗಳಲ್ಲಿ ನಿರ್ಮಿಸಿರುವ ಸೆಲ್ಫಿ ಸ್ಪಾಟ್ ಗಳಿಗೆ ಜನರಿಂದ ಅತ್ಯುತ್ತಮ ಸ್ಪಂದನೆ ಸಿಗುತ್ತಿದೆ.
ನೀವು ಸೆಲ್ಫಿ ಕ್ಲಿಕ್ಕಿಸಿಕೊಳ್ಳಿ, ಅದಕ್ಕೊಂದು ಪ್ರಮಾಣ ಪತ್ರವೂ ಸಿಗಲಿದೆ. ಈ ಬಗ್ಗೆ ಕೆಎಸ್ಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜ್ ಮಾತನಾಡಿ, ನಮ್ಮ ವಿಭಾಗದ ಆರು ಡಿಪೋಗಳ ವ್ಯಾಪ್ತಿಗೆ ಬರುವ ಎಲ್ಲಾ ಬಸ್ ನಿಲ್ದಾಣಗಳಲ್ಲಿ ಸೆಲ್ಫಿ ಸ್ಪಾಟ್ ರಚಿಸಿ, ಅಲ್ಲಿ ಒಬ್ಬ ಉದ್ಯೋಗಿಯನ್ನಿಟ್ಟು ಸೆಲ್ಫಿ ಕ್ಲಿಕ್ಕಿಸಿ ಅಪ್ ಲೋಡ್ ಮಾಡಲು ಅನುಕೂಲ ಮಾಡಿಕೊಡಲಾಗಿದೆ ಎಂದರು.