ಸಾರಾಂಶ
ಹಿರಿಯ ನಾಗರೀಕರಿಗೆ ಆಯುಷ್ಮಾನ್ ವಯೋ ವಂದನ ಕಾರ್ಡ್ ವಿತರಣಾ ಸಮಾರಂಭವನ್ನು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ವೀರೇಶ್ ಉದ್ಘಾಟಿಸಿದರು.
ಹಿರಿಯ ನಾಗರೀಕರಿಗೆ ಆಯುಷ್ಮಾನ್ ವಯೋ ವಂದನ ಕಾರ್ಡ್ ವಿತರಣೆಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಹಿರಿಯ ನಾಗರೀಕರು, ವಿಕಲಚೇತನರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತಲುಪಿಸುವಲ್ಲಿ ಬಸವೇಶ್ವರವಿದ್ಯಾಸಂಸ್ಥೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ವೀರೇಶ್ ತಿಳಿಸಿದರು.
ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ, ಸಬಲೀಕರಣ ಇಲಾಖೆ, ಬಸವೇಶ್ವರ ವಿದ್ಯಾಸಂಸ್ಥೆ ಆಶ್ರಯದಲ್ಲಿ ಹೊಂಬೆಳಕು ಹಿರಿಯ ನಾಗರೀಕರ ಸಹಾಯವಾಣಿ ಕೇಂದ್ರದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಹಿರಿಯ ನಾಗರೀಕರಿಗೆ ಆಯುಷ್ಮಾನ್ ವಯೋ ವಂದನ ಕಾರ್ಡ್ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ವಯಸ್ಸಾದ ಮೇಲೆ ಹಿರಿಯರು ಒಂದಲ್ಲ ಒಂದು ರೀತಿಯ ಕಷ್ಟ ಅನುಭವಿಸುತ್ತಿರುತ್ತಾರೆ. ಸರ್ಕಾರಿ ನೌಕರಿಯಿಂದ
ನಿವೃತ್ತಿಯಾಗಿ ಪಿಂಚಣಿ ಪಡೆಯುತ್ತಿರುವವರು ನೆಮ್ಮದಿಯಾಗಿ ಬದುಕಬಹುದು. ಆದರೆ ಯಾವುದೇ ರೀತಿಯ ಸವಲತ್ತುಗಳಿಲ್ಲದೆ ಬದುಕುವುದು ಕಷ್ಟದ ಕೆಲಸ. ಇಂತಹ ಪರಿಸ್ಥಿತಿಯಲ್ಲಿ ಬಸವೇಶ್ವರ ವಿದ್ಯಾಸಂಸ್ಥೆ, ಹಿರಿಯ ನಾಗರೀಕರು ಹಾಗೂ ವಿಕಲಚೇತನರ ಪರವಾಗಿ ಕೆಲಸ ಮಾಡುತ್ತಿರುವುದು ನಿಜಕ್ಕೂ ಮೆಚ್ಚುವಂತದ್ದು ಎಂದರು. ಸಮಾಜ ಸೇವಕ ಎಸ್.ಷಣ್ಮುಖಪ್ಪ ಮಾತನಾಡಿ, ಹಿರಿಯ ನಾಗರೀಕರು ಹಾಗೂ ವಿಕಲಚೇತನರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಗುವ ಸೌಲತ್ತುಗಳು ತಲುಪಬೇಕು. ಈ ನಿಟ್ಟಿನಲ್ಲಿ ಬಸವೇಶ್ವರ ವಿದ್ಯಾಸಂಸ್ಥೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ ಎಂದರು.ಸಮಾರಂಭದ ಅಧ್ಯಕ್ಷತೆಯನ್ನು ಬಸವೇಶ್ವರ ವಿದ್ಯಾಸಂಸ್ಥೆ ಅಧ್ಯಕ್ಷೆ ಪ್ರಭಾವತಿ ಶಂಕರಪ್ಪ ವಹಿಸಿದ್ದರು. ಕಾರ್ಯಕ್ರಮದಲ್ಲಿ ಚಾರ್ಟೆರ್ಡ್ ಅಕೌಂಟೆಂಟ್ ಚಂದ್ರಣ್ಣ, ನಿವೃತ್ತ ಪ್ರಾಚಾರ್ಯ ಕೋರಧಾನ್ಯ ಮಠದ ಗುರುಬಸವಯ್ಯ ಇದ್ದರು.