ಸಾರಾಂಶ
ಸರ್ಕಾರದಿಂದ ಖರೀದಿ ಕೇಂದ್ರ ತೆರೆಯಲು ತಡವಾಗಿದೆ. ರೈತರು ಇದಕ್ಕೆ ಸಹಕರಿಸಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ ಖರೀದಿ ಕೇಂದ್ರದತ್ತ ಮುಖ ಮಾಡಬೇಕು. ಭತ್ತಕ್ಕೆ 2300 ರು ಹಾಗೂ ರಾಗಿಗೆ 4290 ರು. ಸರ್ಕಾರ ನಿಗಧಿ ಮಾಡಿದೆ. ರೈತರು ಖರೀದಿ ಕೇಂದ್ರಕ್ಕೆ ಬಂದು ನೋಂದಾಯಿಸಿಕೊಳ್ಳಬೇಕು.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ದಲ್ಲಾಳಿಗಳ ಹಾವಳಿ ತಪ್ಪಿಸಲು ರೈತರು ತಾವು ಬೆಳೆದ ಧಾನ್ಯಗಳನ್ನು ನೇರವಾಗಿ ಖರೀದಿ ಕೇಂದ್ರದ ಮೂಲಕ ಮಾರಾಟ ಮಾಡಬೇಕು ಎಂದು ಸೆಸ್ಕ್ ಅಧ್ಯಕ್ಷ ಹಾಗೂ ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು.ಪಟ್ಟಣದ ಟಿಎಪಿಸಿಎಂಎಸ್ ಕಲ್ಯಾಣ ಮಂಟಪ ಆವರಣದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಲದಿಂದ ತೆರೆದಿರುವ ಧಾನ್ಯ ಖರೀದಿ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು.
ಸರ್ಕಾರದಿಂದ ಖರೀದಿ ಕೇಂದ್ರ ತೆರೆಯಲು ತಡವಾಗಿದೆ. ರೈತರು ಇದಕ್ಕೆ ಸಹಕರಿಸಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ ಖರೀದಿ ಕೇಂದ್ರದತ್ತ ಮುಖ ಮಾಡಬೇಕು. ಭತ್ತಕ್ಕೆ 2300 ರು ಹಾಗೂ ರಾಗಿಗೆ 4290 ರು. ಸರ್ಕಾರ ನಿಗಧಿ ಮಾಡಿದೆ. ರೈತರು ಖರೀದಿ ಕೇಂದ್ರಕ್ಕೆ ಬಂದು ನೋಂದಾಯಿಸಿಕೊಳ್ಳಬೇಕು ಎಂದರು.ಈಗಾಗಲೇ 23 ಮಂದಿ ರೈತರು ರಾಗಿ ಖರೀದಿಗೆ ನೋಂದಣಿ ಮಾಡಿಸಿದ್ದಾರೆ. ಭತ್ತಕ್ಕೆ 173 ಮಂದಿ ನೋಂದಾಯಿಸಿಕೊಂಡಿದ್ದಾರೆ. ಹೆಚ್ಚಿನ ವಿವರಗಳಿಗೆ ಖರೀದಿ ಕೇಂದ್ರದ ಅಧಿಕಾರಿಗಳನ್ನು ಭೇಟಿ ಮಾಡುವಂತೆ ತಿಳಿಸಿದರು.
ಈ ವೇಳೆ ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ನಂದೀಶ್, ತಹಸೀಲ್ದಾರ್ ಪರುಶುರಾಮ್ ಸತ್ತಿಗೇರಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಎಂ.ಎಲ್. ದಿನೇಶ್, ಟಿಎಪಿಸಿಎಂಎಸ್ ನಿರ್ದೇಶಕರಾದ ಬಸ್ತಿಪುರ ನಾಗರಾಜು, ಶ್ರೀಕಂಠು ಸೇರಿದಂತೆ ಇತರ ಅಧಿಕಾರಿ ವರ್ಗ ಉಪಸ್ಥಿತರಿದ್ದರು.