26 ರಂದು ಕವಿರಾಜಮಾರ್ಗ ಕುರಿತು ವಿಚಾರ ಸಂಕಿರಣ

| Published : Jun 23 2025, 11:53 PM IST

ಸಾರಾಂಶ

ಜೆಎಸ್‌ಎಸ್‌ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾವು ಜೂ. 26 ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಕವಿರಾಜಮಾರ್ಗ: ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಿದೆ.

ಕನ್ನಡಪ್ರಭ ವಾರ್ತೆ ಮೈಸೂರುಜೆಎಸ್‌ಎಸ್‌ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾವು ಜೂ. 26 ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಕವಿರಾಜಮಾರ್ಗ: ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಿದೆ.ಅಂದು ಬೆಳಗ್ಗೆ 10ಕ್ಕೆ ಕಾರ್ಯಕ್ರಮವನ್ನು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಉದ್ಘಾಟಿಸಲಿದ್ದು, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರಸ್ವಾಮೀಜಿ ಸಾನ್ನಿಧ್ಯವಹಿಸುವರು. ವಿಶ್ರಾಂತ ಪ್ರಾಧ್ಯಾಪಕ ಡಾ. ಪ್ರಧಾನ ಗುರುದತ್ತ ಅಧ್ಯಕ್ಷತೆ ವಹಿಸಲಿದ್ದು, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜ್‌ ಮುಖ್ಯ ಅತಿಥಿಯಾಗಿರುವರು. ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ವಿ. ಸಾಂಬಶಿವಯ್ಯ ಮತ್ತು ಪ್ರಾಂಶುಪಾಲ ಡಾ.ಎಂ. ಪ್ರಭು ಪಾಲ್ಗೊಳ್ಳುವರು.ಮಧ್ಯಾಹ್ನ 12ಕ್ಕೆ ಕವಿರಾಜಮಾರ್ಗ - ಕನ್ನಡ ಕುರಿತು ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಜಯಶಂಕರ ಹಲಗೂರು ವಿಚಾರ ಮಂಡಿಸಲಿದ್ದು, ವಿಶ್ರಾಂತ ಪ್ರಾಧ್ಯಾಪಕ ಡಾ.ಸಿ.ಪಿ. ಸಿದ್ಧಾಶ್ರಮ ಅಧ್ಯಕ್ಷತೆ ವಹಿಸುವರು. ಮಧ್ಯಾಹ್ನ 1 ಗಂಟೆಯ ಗೋಷ್ಠಿಯಲ್ಲಿ ಕಾಸರಗೂಡು ಕಣ್ಣೂರು ವಿವಿಯ ಪ್ರಾಧ್ಯಾಪಕ ಡಾ. ರತ್ನಾಕರ ಮಲ್ಲಮೂಲೆ ವಿಚಾರ ಮಂಡಿಸಲಿದ್ದು, ಸಂಗೀತ ವಿವಿ ಪರೀಕ್ಷಾಂಗ ಕುಲಸಚಿವ ಡಾ.ಎಂ.ಜಿ. ಮಂಜುನಾಥ್‌ ಅಧ್ಯಕ್ಷತೆ ವಹಿಸುವರು.ಮಧ್ಯಾಹ್ನ 2.40ಕ್ಕೆ ನಡೆಯುವ ಗೋಷ್ಠಿಯಲ್ಲಿ ಮುಕ್ತ ವಿವಿ ಕನ್ನಡ ವಿಭಾಗದ ಪ್ರಾಧ್ಯಾಪಕಿ ಡಾ. ಕವಿತಾ ರೈ ಅಧ್ಯಕ್ಷತೆ ವಹಿಸಲಿದ್ದು, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಪ್ರಾಧ್ಯಾಪಕಿ ಡಾ.ಎಸ್‌.ಡಿ. ಶಶಿಕಲಾ ವಿಚಾರ ಮಂಡಿಸುವರು.ಸಂಜೆ 4 ಗಂಟೆಗೆ ನಡೆಯುವ ಪ್ರಬಂಧ ಮಂಡನಾ ಗೋಷ್ಠಿಯಲ್ಲಿ ಮುಕ್ತ ವಿವಿ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ.ಪಿ. ಮಣಿ, ವಿಶ್ರಾಂತ ಪ್ರಾಧ್ಯಾಪಕಿ ಡಾ.ಎಚ್‌.ಟಿ. ಶೈಲಜಾ ಸಂವಾದಕರಾಗಿ ಪಾಲ್ಗೊಳ್ಳುವರು. ಜೆಎಸ್‌ಎಸ್‌ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ. ಮೊರಬದ ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸುವರು.