ಅರೆಭಾಷೆಯ ಸೊಗಡು ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಉಳಿಸಿ ಬೆಳೆಸಲು ಇಂತಹ ವಿಚಾರಸಂಕಿರಣ ಅವಶ್ಯ ಎಂದು ಅಕಾಡೆಮಿ ಆಫ್ ಲಿಬರಲ್‌ ಜುಕೇಶನ್ ಸುಳ್ಯ ಇದರ ಅಧ್ಯಕ್ಷ ಡಾ. ಕೆ.ವಿ. ಚಿದಾನಂದಹೇಳಿದರು.

ನಾಪೋಕ್ಲು: ಅರೆಭಾಷೆಯ ಸೊಗಡು ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಉಳಿಸಿ ಬೆಳೆಸಲು ಇಂತಹ ವಿಚಾರ

ಸಂಕಿರಣ ಅವಶ್ಯ ಎಂದು ಅಕಾಡೆಮಿ ಆಫ್ ಲಿಬರಲ್‌ ಜುಕೇಶನ್ ಸುಳ್ಯ ಇದರ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ

ಹೇಳಿದರು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಸುವರ್ಣ ಮಹೋತ್ಸವ ವರ್ಷದ ಅಂಗವಾಗಿ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿದ ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ–2026ನ್ನು ನೆಹರೂ ಮೆಮೋರಿಯಲ್ ಕಾಲೇಜಿನ ಕೆ.ವಿ.ಜಿ. ಷಷ್ಯಬ್ಬ ವೇದಿಕೆಯಲ್ಲಿ ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಮಾತನಾಡಿ, ಅರೆಭಾಷೆಯ ಸಂರಕ್ಷಣೆ ಹಾಗೂ ಅದರ ಸಾಹಿತ್ಯಿಕ ಬೆಳವಣಿಗೆಗೆ ನಿರಂತರ ಪ್ರಯತ್ನ ಅಗತ್ಯ ಎಂದರು.

ಮುಖ್ಯ ಅತಿಥಿಯಾಗಿ ಎಒಎಲ್ ಇ ಸುಳ್ಯ ಪ್ರಧಾನ ಕಾರ್‍ಯದರ್ಶಿ ಅಕ್ಷಯ್ ಕೆ.ಸಿ. ಉಪಸ್ಥಿತರಿದ್ದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸಂಚಾಲಕ ಚಂದ್ರಶೇಖರ್ ಪೇರಾಲು, ಸದಸ್ಯರಾದ ಎನ್.ಎ. ಜ್ಞಾನೇಶ್, ಚಂದ್ರಾವತಿ ಬಡ್ಡಡ್ಕ, ಪ್ರಕಾಶ್ ಕುಡ್ಪಾಜೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಕೆ.ಟಿ. ವಿಶ್ವನಾಥ್, ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ., ಹಾಗೂ ನೆಹರೂ ಮೆಮೋರಿಯಲ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ಮಿಥಾಲಿ ಪಿ. ರೈ ಉಪಸ್ಥಿತರಿದ್ದರು.ಸಭಾ ಕಾರ್‍ಯಕ್ರಮದ ಬಳಿಕ ಭಾಷಾ ವಿಚಾರ ಸಂಕಿರಣವನ್ನು ಉದ್ಘಾಟಿಸಲಾಯಿತು. ವಿಚಾರ ಸಂಕಿರಣದಲ್ಲಿ ವಿವಿಧ ವಿಷಯಗಳ ಕುರಿತು ಸಂಪನ್ಮೂಲ ವ್ಯಕ್ತಿ, ವಿದ್ವಾಂಸರು ಹಾಗೂ ವಿಶ್ರಾಂತ ಕುಲಪತಿ ಡಾ. ಚಿನ್ನಪ್ಪ ಗೌಡ, ಮಂಗಳೂರು ವಿವಿ ಕನ್ನಡ ವಿಭಾಗದ ಪ್ರಾಧ್ಯಾಪಕ ಧನಂಜಯ ಕುಂಬ್ಳೆ, ಸಾಹಿತಿ, ವಿಶ್ರಾಂತ ಪ್ರಾಧ್ಯಾಪಕ ನರೇಂದ್ರ ರೈ ದೇರ್ಲ, ಹಿರಿಯ ಚಿಂತಕ, ಸಾಹಿತಿ ರಾಧಾಕೃಷ್ಣ ಕೆ.ಇ., ಕೆ. ಆರ್ ಗಂಗಾಧರ್, ಡಾ. ಪುರುಷೋತ್ತಮ ಕರಂಗಲ್ಲು, ಪಟ್ಟಡ ಶಿವಕುಮಾರ್, ದೊಡ್ಡಣ್ಣ ಬರಮೇಲು, ಜಯಪ್ರಕಾಶ್ ಕುಕ್ಕೆಟ್ಟಿ, ಡಾ. ಕರುಣಾಕರ ನಿಡಿಂಜಿ, ಡಾ. ದಯಾನಂದ ಕೂಡಕಂಡಿ ಅವರಿಂದ ವಿವಿಧ ವಿಚಾರಗಳ ಕುರಿತು ಉಪನ್ಯಾಸ ನೀಡಿದರು.ಕಾರ್‍ಯಕ್ರಮದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರು, ಸಿಬ್ಬಂದಿ, ಸಾಹಿತಿಗಳು, ವಿಚಾರ ಸಂಕಿರಣದಲ್ಲಿ ವಿಚಾರ ಸಂಪನ್ಮೂಲ ವ್ಯಕ್ತಿಗಳು, ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಕಾರ್‍ಯಕ್ರಮದಲ್ಲಿ ಚಂದ್ರಶೇಖರ್ ಪೆರಾಲು ಪ್ರಾಸ್ತಾವಿಕವಾಗಿ ಮಾತನಾಡಿದರು. ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರಾದ ಡಾ. ಅನುರಾಧ ಕುರುಂಜಿ ನಿರೂಪಿಸಿದರು, ಡಾ. ರುದ್ರ ಕುಮಾರ್ ಎಂ.ಎಂ. ವಂದಿಸಿದರು.