5 ವರ್ಷಕ್ಕೊಮ್ಮೆ ಬಳಿ ಬರೋರನ್ನು ಮನೆಗೆ ಕಳಿಸಿ: ಸಿದ್ದೇಶ್ವರ

| Published : May 05 2024, 02:01 AM IST

5 ವರ್ಷಕ್ಕೊಮ್ಮೆ ಬಳಿ ಬರೋರನ್ನು ಮನೆಗೆ ಕಳಿಸಿ: ಸಿದ್ದೇಶ್ವರ
Share this Article
  • FB
  • TW
  • Linkdin
  • Email

ಸಾರಾಂಶ

ಚುನಾವಣೆ ಬಂದಾಗ 5 ವರ್ಷಕ್ಕೊಮ್ಮೆ ನಿಮ್ಮ ಬಳಿ ಬಂದು ಮತ ಕೇಳುವವರನ್ನು ನಿರ್ದಾಕ್ಷಿಣ್ಯವಾಗಿ ಮನೆಗೆ ಕಳುಹಿಸಿ ಎಂದು ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸಂಸದ ಡಾ. ಜಿ.ಎಂ. ಸಿದ್ದೇಶ್ವರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- ಪತ್ನಿ ಗಾಯತ್ರಿ ಪರ ಪ್ರಚಾರ - ತ್ಯಾವಣಗಿಯಲ್ಲಿ ಬಹಿರಂಗ ಸಭೆ

- - -

ಕನ್ನಡಪ್ರಭ ವಾರ್ತೆ, ದಾವಣಗೆರೆ

ಚುನಾವಣೆ ಬಂದಾಗ 5 ವರ್ಷಕ್ಕೊಮ್ಮೆ ನಿಮ್ಮ ಬಳಿ ಬಂದು ಮತ ಕೇಳುವವರನ್ನು ನಿರ್ದಾಕ್ಷಿಣ್ಯವಾಗಿ ಮನೆಗೆ ಕಳುಹಿಸಿ ಎಂದು ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸಂಸದ ಡಾ. ಜಿ.ಎಂ. ಸಿದ್ದೇಶ್ವರ್ ಆಕ್ರೋಶ ವ್ಯಕ್ತಪಡಿಸಿದರು.

ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತ್ಯಾವಣಗಿಯಲ್ಲಿ ಆಯೋಜಿಸಿದ್ದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, 5 ವರ್ಷಕ್ಕೊಮ್ಮೆ ನಿಮ್ಮ ಬಳಿ ಬರುವವರನ್ನು ಯಾವುದೇ ಕಾರಣಕ್ಕೂ ನಂಬಬೇಡಿ. ನಿಮ್ಮ ಜೊತೆಯಲ್ಲಿದ್ದು, ನಿಮ್ಮ ಕಷ್ಟ- ಸುಖಗಳಿಗೆ ಭಾಗಿಯಾಗುವ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರಿಗೆ ನಿಮ್ಮ ಅಮೂಲ್ಯ ಮತಗಳನ್ನು ನೀಡಿ ಎಂದು ಮನವಿ ಮಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಸೋಲುವ ಭೀತಿಯಿಂದ ಕ್ಷೇತ್ರದ ತುಂಬ ಇಲ್ಲ ಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ. ಕಳೆದ 4 ಚುನಾವಣೆಯಿಂದ ಇದೇ ಕೆಲಸ ಮಾಡುತ್ತಿರುವ ಕಾಂಗ್ರೆಸ್ಸಿಗರಿಗೆ ಕ್ಷೇತ್ರದ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ವಾರಂಟಿಯೇ ಇಲ್ಲದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಕಾರ್ಡ್‌ಗಳನ್ನು ಹಂಚುತ್ತಿದೆ. ಇಡೀ ದೇಶದಲ್ಲಿ ಕೇವಲ 230 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ ಮಾಡಿರುವ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರಕ್ಕೆ ಬರಲು 272 ಸಂಸದರು ಬೇಕು ಎನ್ನುವ ಪರಿಜ್ಞಾನವೇ ಇಲ್ಲ. ದೇಶದಲ್ಲಿ 20ರಿಂದ 30 ಸೀಟು ಗೆಲ್ಲುವ ಕಾಂಗ್ರೆಸ್‌ ಜನರಿಗೆ ಗ್ಯಾರಂಟಿಗಳ ಮೂಲಕ ಟೋಪಿ ಹಾಕಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದರು.

ಮೇ 7ರ ಮಂಗಳವಾರ ನಡೆಯುವ ಚುನಾವಣೆಯಲ್ಲಿ ಕ್ರಮ ಸಂಖ್ಯೆ 1, ಕಮಲದ ಗುರುತಿಗೆ ಮತ ನೀಡುವ ಮೂಲಕ ಗಾಯತ್ರಿ ಸಿದ್ದೇಶ್ವರ ಅವರನ್ನು ಅತ್ಯಾಧಿಕ ಮತಗಳಿಂದ ಆರಿಸಿ ದೆಹಲಿಗೆ ಕಳುಹಿಸಿ ಎಂದು ಮನವಿ ಮಾಡಿದರು.

ಮಾಯಕೊಂಡ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪ್ರೊ. ಎನ್.ಲಿಂಗಣ್ಣ, ಮಂಡಲ ಅಧ್ಯಕ್ಷ ಶ್ಯಾಗಲೆ ದೇವೇಂದ್ರಪ್ಪ, ಎಸ್.ಟಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಜಿ.ಎಸ್. ಶ್ಯಾಮ್, ಮುಖಂಡರಾದ ಅಣಬೇರು ಜೀವನಮೂರ್ತಿ, ಮಂಡಲ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ್ ನಾಯ್ಕ್ ಇದ್ದರು.

- - - -4ಕೆಡಿವಿಜಿ50ಃ:

ದಾವಣಗೆರೆ ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ತ್ಯಾವಣಗಿಯಲ್ಲಿ ಸಂಸದ ಡಾ. ಜಿ.ಎಂ. ಸಿದ್ದೇಶ್ವರ ಚುನಾವಣಾ ಪ್ರಚಾರ ಸಭೆ ನಡೆಸಿದರು.