ನರಸಿಂಹರಾಜಪುರ: ತಾಲೂಕು ಹಿರಿಯ ನಾಗರೀಕ ವೇದಿಕೆಯಿಂದ ಶತಾಯುಷಿ ಪ್ಯಾರಿ ಜಾನ್ ಅವರನ್ನು ಹಿರಿಯ ನಾಗರಿಕ ವೇದಿಕೆಯ ಸದಸ್ಯ ಪಿ.ಸಿ.ಮ್ಯಾಥ್ಯೂ ಅವರ ಮನೆಯಲ್ಲಿ ಇತ್ತೀಚಿಗೆ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ನರಸಿಂಹರಾಜಪುರ: ತಾಲೂಕು ಹಿರಿಯ ನಾಗರೀಕ ವೇದಿಕೆಯಿಂದ ಶತಾಯುಷಿ ಪ್ಯಾರಿ ಜಾನ್ ಅವರನ್ನು ಹಿರಿಯ ನಾಗರಿಕ ವೇದಿಕೆಯ ಸದಸ್ಯ ಪಿ.ಸಿ.ಮ್ಯಾಥ್ಯೂ ಅವರ ಮನೆಯಲ್ಲಿ ಇತ್ತೀಚಿಗೆ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ತಾಲೂಕು ಹಿರಿಯ ನಾಗರಿಕ ವೇದಿಕೆ ಅಧ್ಯಕ್ಷ ಎಚ್.ಆರ್.ದಿನೇಶ್ ವಹಿಸಿದ್ದರು. ಸಭೆಯಲ್ಲಿ ಕಾರ್ಯದರ್ಶಿ ಪಿ.ಎಸ್.ವಿದ್ಯಾನಂದಕುಮಾರ್, ವೇದಿಕೆ ಪದಾಧಿಕಾರಿಗಳು ಇದ್ದರು. ಇದೇ ಸಂದರ್ಭದಲ್ಲಿ ಈ ಹಿಂದೆ ತಾಲೂಕು ಹಿರಿಯ ನಾಗರಿಕ ವೇದಿಕೆಯಿಂದ ಸನ್ಮಾನಿಸಿದ್ದ 75 ವರ್ಷ ತುಂಬಿದ 22 ಹಿರಿಯ ನಾಗರಿಕರಿಗೆ ಸನ್ಮಾನಿಸಿದ ಭಾವ ಚಿತ್ರವನ್ನು ವಿತರಣೆ ಮಾಡಲಾಯಿತು. ಸಭೆಯಲ್ಲಿ ತಾಲೂಕು ಹಿರಿಯ ನಾಗರಿಕ ವೇದಿಕೆಯಿಂದ ಮುಂದಿನ ದಿನಗಳಲ್ಲಿ ನಡೆಸಬೇಕಾದ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು.