ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ ಯಾವುದೇ ಹಿಂಜರಿಕೆಯಿಲ್ಲದೇ ಹಿರಿಯ ನಾಗರಿಕರು ಮುಕ್ತವಾಗಿ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಆಗ ಹಿರಿಯರೂ ಮಾನಸಿಕ ದೈಹಿಕ ಆರೋಗ್ಯವಂತರಾಗಿರಲು ಸಾಧ್ಯ ಎಂದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಿತಿನ್ ಯಶ್ವಂತ್ ರಾವ್ ಹೇಳಿದರು.
ಕನ್ನಡಪ್ರಭ ವಾರ್ತೆ ಉಡುಪಿ
ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ ಯಾವುದೇ ಹಿಂಜರಿಕೆಯಿಲ್ಲದೇ ಹಿರಿಯ ನಾಗರಿಕರು ಮುಕ್ತವಾಗಿ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಆಗ ಹಿರಿಯರೂ ಮಾನಸಿಕ ದೈಹಿಕ ಆರೋಗ್ಯವಂತರಾಗಿರಲು ಸಾಧ್ಯ ಎಂದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಿತಿನ್ ಯಶ್ವಂತ್ ರಾವ್ ಹೇಳಿದರು.ಅವರು ನಗರದ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವನ್ನು ಬಕೆಟ್ ಗೆ ಬಾಲ್ ಎಸೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಮಾತನಾಡಿ, ಹಿರಿಯ ನಾಗರಿಕರು ತಮ್ಮ ವಯಸ್ಸನ್ನು ಲೆಕ್ಕಿಸದೇ ಒಂದಲ್ಲಾ ಒಂದು ಚಟುವಟಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಹಿರಿಯ ನಾಗರಿಕರ ಮನೋಚೈತನ್ಯಕ್ಕಾಗಿ ನಡೆಸುವ ಕಾರ್ಯಕ್ರಮಗಳಲ್ಲಿ ಉತ್ಸುಕತೆಯಿಂದ ಪಾಲ್ಗೊಳ್ಳಬೇಕು ಎಂದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಪಂ ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಕುಮಾರ್ ಶೆಟ್ಟಿ. ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ, ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್, ಹಿರಿಯ ನಾಗರಿಕರ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಕೆ. ಸದಾನಂದ ಹೆಗಡೆ, ಗೌರವಾಧ್ಯಕ್ಷ ಹೆಚ್. ವಿಶ್ವನಾಥ್ ಹೆಗ್ಡೆ, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ವಾಸಂತಿ ರಾವ್ ಕೊರಡ್ಕಲ್, ಬಳಕೆದಾರರ ವೇದಿಕೆಯ ಅಧ್ಯಕ್ಷ ಹರಿಕೃಷ್ಣ ಶಿವತ್ತಾಯ, ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಮುರುಳೀಧರ್, ತಾಲೂಕು ಹಿರಿಯ ನಾಗರಿಕರ ವೇದಿಕೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಹಿರಿಯ ನಾಗರಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ ಸ್ವಾಗತಿಸಿ, ರೆಡ್ಕ್ರಾಸ್ ಗೌರವ ಕಾರ್ಯದರ್ಶಿ ಗಣನಾಥ್ ಎಕ್ಕಾರು ಹಾಗೂ ವಿಶೇಷ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಹೆಚ್ ರವೀಂದ್ರ ನಿರೂಪಿಸಿ, ಇಲಾಖೆಯ ಯೋಜನಾ ಸಹಾಯಕ ಶಿವಾಜಿ ಎ.ಕೆ ವಂದಿಸಿದರು.