ಸಾರಾಂಶ
ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದ್ದು ಈ ವಿಚಾರದಲ್ಲಿ ವಿದ್ಯಾರ್ಥಿಗಳು ಸಾರ್ವಜನಿಕವಾಗಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು
ಕನ್ನಡಪ್ರಭ ವಾರ್ತೆ ಕೆ.ಆರ್. ನಗರ
ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದ್ದು ಈ ವಿಚಾರದಲ್ಲಿ ವಿದ್ಯಾರ್ಥಿಗಳು ಸಾರ್ವಜನಿಕವಾಗಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಸಿ.ಅರವೀಂದ್ರ ಹೇಳಿದರು.ಸಾಲಿಗ್ರಾಮ ತಾಲೂಕಿನ ಮಿರ್ಲೆ ಮಿಥಿಲಾ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ವಕೀಲರ ಸಂಘ ಮತ್ತು ಕಾನೂನು ಸೇವಾ ಸಮಿತಿ, ಸಾಮಾಜಿಕ ಅರಣ್ಯ ಇಲಾಖೆ, ಪ್ರಾದೇಶಿಕ ಅರಣ್ಯ ಇಲಾಖೆ, ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದಿನೇ ದಿನೇ ಅರಣ್ಯನಾಶವಾಗುತ್ತಿರುವುದರಿಂದ ಪರಿಸರದ ಮೇಲೆ ಮಾರಕ ಪರಿಣಾಮ ಬೀರುತ್ತದೆ. ಮನುಷ್ಯನಿಗೆ ಆರೋಗ್ಯದಷ್ಟೆ ಪ್ರಮುಖವಾಗಿ ಪರಿಸರ ಕಾಳಜಿಯೂ ಇರಬೇಕಾಗಿದ್ದು ಪ್ರತಿಯೊಬ್ಬರೂ ಗಿಡ ಮರಗಳನ್ನು ಪ್ರೀತಿಸಿ ಅವುಗಳನ್ನು ಬೆಳೆಸುವ ಹವ್ಯಾಸ ರೂಢಿಸಿಕೊಂಡು ಇತರರಿಗೆ ಮಾದರಿಯಾಗಬೇಕು ಎಂದು ಸಲಹೆ ನೀಡಿದರು.ಪ್ರಧಾನ ಸಿವಿಲ್ ನ್ಯಾಯಾಧೀಶ ಕೆ. ಚಂದನ್, ನ್ಯಾಯಾಧೀಶರಾದ ಹರ್ಷಿನ, ತಾಪಂ ಇಒ ಜಿ.ಕೆ. ಹರೀಶ್ ಮಾತನಾಡಿದರು.
ಸಾಮಾಜಿಕ ಅರಣ್ಯ ವಲಯಾಧಿಕಾರಿ ಟಿ.ವಿ. ಹರಿಪ್ರಸಾದ್, ಪ್ರಾದೇಶಿಕ ಅರಣ್ಯ ವಲಯಾಧಿಕಾರಿ ಎಂ.ಆರ್. ರಶ್ಮಿ, ವಕೀಲರಾದ ತಿಮ್ಮಪ್ಪ, ಗಾಯತ್ರಿ, ನೇತ್ರಾವತಿ, ಪ್ರಭಾವತಿ, ರಾಧಿಕ, ಮಂಜಣ್ಣ, ರಾಮಚಂದ್ರರಾವ್, ಮಿಥಿಲಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಬಿ. ಲೋಕನಾಥ್ ಇದ್ದರು.