ಸಾರಾಂಶ
ಕೆಆರ್‌ಎಸ್ ಜಲಾಶಯ ಭರ್ತಿಯಾಗಿ ಕಾವೇರಿ ನದಿ ಮೂಲಕ 1.70 ಲಕ್ಷ ಕ್ಯುಸೆಕ್‌ಗೂ ಅಧಿಕ ನೀರು ಹೊರಬಿಟ್ಟ ಹಿನ್ನೆಲೆಯಲ್ಲಿ ನದಿ ಪಾತ್ರಗಳು ತಗ್ಗು ಪ್ರದೇಶದಲ್ಲಿನ ರೈತರ ಜಮೀನುಗಳಿಗೆ ನೀರು ನುಗ್ಗಿ ಅಪಾರ ತೊಂದರೆಗಳಾಗಿದ್ದ ಸ್ಥಳೀಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಸ್ಥಳಗಳಿಗೆ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ಆನಂದ ಸ್ಥಳೀಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಕೆಆರ್‌ಎಸ್ ಜಲಾಶಯ ಭರ್ತಿಯಾಗಿ ಕಾವೇರಿ ನದಿ ಮೂಲಕ 1.70 ಲಕ್ಷ ಕ್ಯುಸೆಕ್‌ಗೂ ಅಧಿಕ ನೀರು ಹೊರಬಿಟ್ಟ ಹಿನ್ನೆಲೆಯಲ್ಲಿ ನದಿ ಪಾತ್ರಗಳು ತಗ್ಗು ಪ್ರದೇಶದಲ್ಲಿನ ರೈತರ ಜಮೀನುಗಳಿಗೆ ನೀರು ನುಗ್ಗಿ ಅಪಾರ ತೊಂದರೆಗಳಾಗಿದ್ದ ಸ್ಥಳೀಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.
ತಾಲೂಕಿನ ಮರಳಗಾಲ, ದೊಡ್ಡಪಾಳ್ಯ ಹಾಗೂ ಪಟ್ಟಣದ ವೆಲ್ಲೆಸ್ಲಿ ಸೇತುವೆ ಬಳಿ ಹಾನಿಯಾಗಿದ್ದ ರಸ್ತೆ, ತಡೆಗೋಡೆ ಕುಸಿತ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ತ್ವರತವಾಗಿ ಅತಿವೃಷ್ಟಿಯಿಂದ ಹಾನಿಯಾಗಿ ಸಮಸ್ಯೆ ಎದುರಿಸುತ್ತಿರುವ ಅರ್ಹರಿಗೆ ಪರಿಹಾರ ನೀಡಬೇಕು ಎಂದರು.ಜೊತೆಗೆ ವೆಲ್ಲೆಸ್ಲಿ ಸೇತುವೆ ಐತಿಹಾಸಿಕ ಹಿನ್ನೆಲೆ ಹೊಂದಿದೆ. ಸೇತುವೆ ಬಳಿಯೇ ದೊಡ್ಡ ಪ್ರಮಾಣದಲ್ಲಿ ರಸ್ತೆ ಹಾಗೂ ತಡೆಗೋಡೆ ಕುಸಿತಗೊಂಡಿದೆ. ಇದರಿಂದ ಸೇತುವೆಗೆ ಅಪಾಯ ಎದುರಾಗಲಿದೆ. ಶೀಘ್ರ ದುರಸ್ಥಿಗೊಳಿಸುವಂತೆಯೂ ಅವರು ಸೂಚನೆ ನೀಡಿದರು.
ಈ ವೇಳೆ ಪಾಂಡವಪುರ ಉಪವಿಭಾಗಾಧಿಕಾರಿ ನಂದೀಶ್, ತಹಸೀಲ್ದಾರ್ ಪರಶುರಾಮ್ ಸತ್ತೀಗೇರಿ, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕಿ ಗಾಯಿತ್ರಿ, ಪುರಸಭೆ ಮುಖ್ಯಾಧಿಕಾರಿ ಎಂ.ರಾಜಣ್ಣ, ಕಂದಾಯ ನಿರೀಕ್ಷಕ ಟಿ.ಪಿ.ರೇವಣ್ಣ ಸೇರಿದಂತೆ ಇತರ ಅಧಿಕಾರಿಗಳು ಜೊತೆಯಲ್ಲಿದ್ದರು.ಕೆಆರ್ ಎಸ್ ನೀರಿನ ಮಟ್ಟಗರಿಷ್ಠ ಮಟ್ಟ - 124.80 ಅಡಿ
ಇಂದಿನ ಮಟ್ಟ – 124.32 ಅಡಿ
ಒಳ ಹರಿವು – 12,489 ಕ್ಯುಸೆಕ್ಹೊರ ಹರಿವು – 7,752 ಕ್ಯುಸೆಕ್
ನೀರಿನ ಸಂಗ್ರಹ – 48.782 ಟಿಎಂಸಿ