ಬ್ರಹ್ಮಾವರ: ಬ್ರಹ್ಮಾವರ ತಾಲೂಕಿನ ಹಿರಿಯ ಪತ್ರಕರ್ತ ಹಾಗೂ ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ (45) ಶನಿವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬ್ರಹ್ಮಾವರ ಕ್ರಾಸ್‌ಲ್ಯಾಂಡ್‌ ಕಾಲೇಜಿನ ಉಪಪ್ರಾಂಶುಪಾಲರಾಗಿದ್ದ ಶೇಷಗಿರಿ ಭಟ್ ಆರೂರು ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಮ್ಯ ಮನೋಭಾವದ ವ್ಯಕ್ತಿಯಾಗಿದ್ದ ಅವರು ಕಳೆದ ಹಲವಾರು ವರ್ಷಗಳಿಂದ ಬ್ರಹ್ಮಾವರ ತಾಲೂಕು ಪ್ರಜಾವಾಣಿ ಪತ್ರಿಕೆಯ ವರದಿಗಾರರಾಗಿರು. ಕೆಲವು ದಿನಗಳಿಂದ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗುತ್ತಿದ್ದರೂ, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಬ್ರಹ್ಮಾವರ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಮೃತರು ಪತ್ನಿ, ಪುತ್ರ ಹಾಗೂ ತಂದೆ, ತಾಯಿಯನ್ನು ಅಗಲಿದ್ದಾರೆ.