ಸಾಹಿತಿ ಎಸ್.ಎಲ್. ಭೈರಪ್ಪ ನಿಧನ ಸಾಹಿತ್ಯ ಜಗತ್ತಿಗೆ ತುಂಬಲಾರದ ನಷ್ಟ

| Published : Oct 05 2025, 01:00 AM IST

ಸಾಹಿತಿ ಎಸ್.ಎಲ್. ಭೈರಪ್ಪ ನಿಧನ ಸಾಹಿತ್ಯ ಜಗತ್ತಿಗೆ ತುಂಬಲಾರದ ನಷ್ಟ
Share this Article
  • FB
  • TW
  • Linkdin
  • Email

ಸಾರಾಂಶ

ಪರ್ವ ಮತ್ತು ಉತ್ತರಕಾಂಡ ಕಾದಂಬರಿಗಳ ಮೂಲಕ ಮಹಾಭಾರತ ಹಾಗೂ ರಾಮಾಯಣವನ್ನು ನೋಡುವ ಮತ್ತು ಓದುವ ಕ್ರಮವನ್ನು ಬದಲಿಸಿದ ಅಭಿಜಾತ ಕಾದಂಬರಿಕಾರ

ಕನ್ನಡಪ್ರಭ ವಾರ್ತೆ ಕೆ.ಆರ್. ನಗರ ಕನ್ನಡ ಸಾರಸ್ವತ ಲೋಕದ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರ ಅಗಲಿಕೆ ಸಾಹಿತ್ಯ ಜಗತ್ತಿಗೆ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ಡಿಂಡಿಮ ಶಂಕರ್ ಹೇಳಿದರುಪಟ್ಟಣದ ರೋಟರಿ ಕ್ಲಬ್ ಸಭಾಂಗಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆದ ಎಸ್‌.ಎಲ್. ಭೈರಪ್ಪ ಅವರ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪರ್ವ ಮತ್ತು ಉತ್ತರಕಾಂಡ ಕಾದಂಬರಿಗಳ ಮೂಲಕ ಮಹಾಭಾರತ ಹಾಗೂ ರಾಮಾಯಣವನ್ನು ನೋಡುವ ಮತ್ತು ಓದುವ ಕ್ರಮವನ್ನು ಬದಲಿಸಿದ ಅಭಿಜಾತ ಕಾದಂಬರಿಕಾರರಾದ ಸರಸ್ವತಿ ಸಮ್ಮಾನ ಪುರಸ್ಕೃತ ಸಾಹಿತಿ ಪದ್ಮಭೂಷಣ ಎಸ್.ಎಲ್. ಭೈರಪ್ಪ ಅವರು ನಿಧನ ನಾಡಿನ ಜನತೆ ಅರಗಿಸಿಕೊಳ್ಳಲಾಗದ ಸಂಗತಿ ಎಂದರು‌.ಅನಕೃ, ಕುವೆಂಪು, ಡಾ. ರಾಜ್‌ಕುಮಾರ್ ನಂತರದಲ್ಲಿ ಜನ ಮಾನಸವನ್ನು ಆವರಿಸಿದ ಮಹಾನ್‌ಚೇತನವಾಗಿರುವ ಭೈರಪ್ಪನವರು ಶತಮಾನ ಕಂಡ ಅಪರೂಪದ ಸಾಹಿತಿ ಮತ್ತು ಕಾದಂಬರಿಕಾರರಾಗಿದ್ದು ಅವರ ಆದರ್ಶ, ಮೌಲ್ಯ ಹಾಗೂ ವಿಚಾರಧಾರೆಗಳು ಮುಂದಿನ ಪೀಳಿಗೆಗೆ ದಾರಿದೀಪ ಎಂದು ಕೊಂಡಾಡಿದರು. ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಸಿ. ಮೋಹನ್ ಕುಮಾರ್, ಎಸ್.ಎಲ್. ಭೈರಪ್ಪನವರ ಅಭಿಮಾನಿಗಳು, ಕಸಾಪ ಪದಾಧಿಕಾರಿಗಳು, ಕನ್ನಡಾಭಿಮಾನಿಗಳು ಮಾತನಾಡಿದರು.ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕ ಮಿರ್ಲೆ ರಾಧಾಕೃಷ್ಣ,ರೋಟರಿ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ, ನಿವೃತ್ತ ಮುಖ್ಯ ಶಿಕ್ಷಕ ಚಂದ್ರಶೇಖರ್ ಇದ್ದರು.----------------