ನಿವೃತ್ತ ಶಿಕ್ಷಕನಿಗೆ ಆರ್ಥಿಕ ನೆರವು ನೀಡಿದ ಹಿರಿಯ ವಿದ್ಯಾರ್ಥಿಗಳು..!

| Published : Jul 01 2025, 12:48 AM IST

ಸಾರಾಂಶ

ಬಂಡೂರು ಸಾರ್ವಜನಿಕ ಪ್ರೌಢಶಾಲೆಯಲ್ಲಿ ಕಡಿಮೆ ಸಂಬಳ ಪಡೆದು ದೈಹಿಕ ಶಿಕ್ಷಕರಾಗಿ 28 ವರ್ಷಗಳ ಕಾಲ ಸೇವೆ ಸಲ್ಲಿಸಿ ಕೆಲ ವರ್ಷಗಳ ಹಿಂದೆ ನಿವೃತ್ತರಾಗಿದ್ದರು. ಈ ಹಣವನ್ನು ಪಾಪಣ್ಣ ಅವರ ಮಗಳ ವಿದ್ಯಾಭ್ಯಾಸಕ್ಕೆ ಬಳಸಿಕೊಳ್ಳುವಂತೆ ಹೇಳಲಾಗಿದೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಅನಾರೋಗ್ಯ ಪೀಡಿತರಾಗಿರುವ ನಿವೃತ್ತ ದೈಹಿಕ ಶಿಕ್ಷಕ ಪಾಪಣ್ಣ ಅವರಿಗೆ ತಾಲೂಕಿನ ಬಂಡೂರು ಸಾರ್ವಜನಿಕ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳು 2 ಲಕ್ಷ ರು. ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದರು.

ತಾಲೂಕಿನ ತಳಗವಾದಿ ಗ್ರಾಮದ ನಿವೃತ್ತ ದೈಹಿಕ ಶಿಕ್ಷಕ ಪಾಪಣ್ಣ ಅವರ ಮನೆಗೆ ಭೇಟಿ ನೀಡಿದ ಹಿರಿಯ ವಿದ್ಯಾರ್ಥಿಗಳು ಅವರ ಮಗಳ ವಿದ್ಯಾಭ್ಯಾಸಕ್ಕೆ ಜಂಟಿ ಖಾತೆ ತೆರೆಯುವಂತೆ ಸಲಹೆ ನೀಡಿ ಎರಡು ಲಕ್ಷ ರು. ಚೆಕ್ ನನ್ನು ಹಸ್ತಾಂತರ ಮಾಡಿದರು.

ಬಂಡೂರು ಸಾರ್ವಜನಿಕ ಪ್ರೌಢಶಾಲೆಯಲ್ಲಿ ಕಡಿಮೆ ಸಂಬಳ ಪಡೆದು ದೈಹಿಕ ಶಿಕ್ಷಕರಾಗಿ 28 ವರ್ಷಗಳ ಕಾಲ ಸೇವೆ ಸಲ್ಲಿಸಿ ಕೆಲ ವರ್ಷಗಳ ಹಿಂದೆ ನಿವೃತ್ತರಾಗಿದ್ದರು. ಕಳೆದ ಎರಡು ವರ್ಷಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರ ಕುಟುಂಬಕ್ಕೆ ನೆರವಾಗುವ ದೃಷ್ಟಿಯಿಂದ ಈಚೆಗೆ ನಡೆದ ನಿವೃತ್ತ ಮುಖ್ಯಶಿಕ್ಷಕ ಕೆ.ಎನ್.ಶಿವಕುಮಾರ್ ಅಭಿನಂದನಾ ಕಾರ್ಯಕ್ರಮದಲ್ಲಿ ಎಲ್ಲ ಹಿರಿಯ ವಿದ್ಯಾರ್ಥಿಗಳ ಸಲಹೆಯಂತೆ ಆರ್ಥಿಕ ಸಹಾಯ ಮಾಡಲಾಗಿದೆ. ಈ ಹಣವನ್ನು ಪಾಪಣ್ಣ ಅವರ ಮಗಳ ವಿದ್ಯಾಭ್ಯಾಸಕ್ಕೆ ಬಳಸಿಕೊಳ್ಳುವಂತೆ ಹೇಳಲಾಗಿದೆ ಎಂದು ಹಿರಿಯ ವಿದ್ಯಾರ್ಥಿಗಳು ತಿಳಿಸಿದರು.

ನಾಳೆ ಪ್ರಸ್ತುತ ರಾಜಕೀಯದಲ್ಲಿ ಯುವಕರ ಪಾತ್ರ ವಿಚಾರಸಂಕಿರಣ

ಕನ್ನಡಪ್ರಭ ವಾರ್ತೆ ಮಂಡ್ಯ

ಕನ್ನಡ ಸೇನೆ ಕರ್ನಾಟಕ ವತಿಯಿಂದ ‘ಪ್ರಸ್ತುತ ರಾಜಕೀಯದಲ್ಲಿ ಯುವಕರ ಪಾತ್ರ’ ಎಂಬ ವಿಚಾರ ಸಂಕಿರಣವನ್ನು ಜುಲೈ 2 ರಂದು ಮಂಡ್ಯದ ಗಾಂಧಿ ಭವನದಲ್ಲಿ ಹಮ್ಮಿಕೊಳಲಾಗಿದೆ ಎಂದು ಕನ್ನಡ ಸೇನೆ ಕರ್ನಾಟಕ ಮಂಡ್ಯ ಜಿಲ್ಲಾಧ್ಯಕ್ಷ ಎಚ್ ಸಿ ಮಂಜುನಾಥ್ ತಿಳಿಸಿದರು.

ಕನ್ನಡ ಸೇನೆ ಕರ್ನಾಟಕ ಕಳೆದ 20 ವರ್ಷಗಳಿಂದ ನಿರಂತರವಾಗಿ ನಾಡು ನುಡಿ ಜಲ ಹಾಗೂ ಮಂಡ್ಯ ಜಿಲ್ಲೆಯ ಅಭಿವೃದ್ಧಿ ಸಮಗ್ರ ರೈತರ ಅಭಿವೃದ್ಧಿಗೆ ಹೋರಾಟವನ್ನು ಮಾಡಿಕೊಂಡು ಬಂದಿದೆ. ರಾಜಕೀಯದಲ್ಲಿ ಯುವಕರಿಗೆ ಹೆಚ್ಚು ಆದ್ಯತೆ ಸಿಗಬೇಕು. ಚುನಾವಣೆಗಳಿಗೆ ಸ್ಪರ್ಧಿಸುವ ವ್ಯಕ್ತಿಗಳು ತಮ್ಮ ಕ್ಷೇತ್ರದಲ್ಲಿ ಯಾವ ರೀತಿ ಸಮಾಜಕ್ಕೆ ಮತ್ತು ನಾಡಿಗೆ ಶಾಶ್ವತವಾಗಿ ಉಳಿಯುವ ಕೆಲಸ ಮಾಡಬೇಕು. ಭ್ರಷ್ಟಾಚಾರ ಮುಕ್ತ ರಾಜಕೀಯಕ್ಕೆ ಪ್ರಯತ್ನಿಸಬೇಕು ಎಂಬುದರ ಮೇಲೆ ಬೆಳಕು ಚೆಲ್ಲುವುದು ವಿಚಾರ ಸಂಕಿರಣದ ಉದ್ದೇಶವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸಮಾರಂಭವನ್ನು ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಉದ್ಘಾಟಿಸುವರು. ಸಮಾರಂಭದ ಪ್ರಧಾನ ಭಾಷಣವನ್ನು ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ ಮಾಡಲಿದ್ದು. ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್. ಕುಮಾರ್ ಅಧ್ಯಕ್ಷತೆ ವಹಿಸುವರು.

ಪ್ರಾಸ್ತಾವಿಕ ನುಡಿಯನ್ನ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ಮಾಡಲಿದ್ದಾರೆ ಮುಖ್ಯ ಅತಿಥಿಗಳಾಗಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ರವಿಕುಮಾರ್ ಗಣಿಗ. ವಿಧಾನಪರಿಷತ್ತಿನ ಸದಸ್ಯರಾದ ದಿನೇಶ್ ಗೂಳಿಗೌಡ. ಮಾಜಿ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಎಂ.ಡಿ.ಲಕ್ಷ್ಮೀನಾರಾಯಣ್. ಪಿಇಟಿ ಸಂಸ್ಥೆ ಕೆ ಎಸ್ ವಿಜಯನಂದ. ಕನ್ನಡ ಸೇನೆ ರಾಜ್ಯ ಉಪಾಧ್ಯಕ್ಷರಾದ ಮುನಿರಾಜುಗೌಡ . ಕಾರ್ಯಾಧ್ಯಕ್ಷರಾದ ಮುನಿಕೃಷ್ಣೇಗೌಡ ಬೆಟ್ಟಳ್ಳಿ ಮಂಜುನಾಥ್ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಕಾರ್ಯಾಧ್ಯಕ್ಷರಾದ ಮಂಡಿ ಬೆಟ್ಟಳ್ಳಿ ಮಂಜುನಾಥ್. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್, ಉಪಾಧ್ಯಕ್ಷರಾದ ಎಡಗನಹಳ್ಳಿ ಮಧು. ತಾಲೂಕು ಅಧ್ಯಕ್ಷ ಸತೀಶ್. ಇತರರಿದ್ದರು.