ಸಾರಾಂಶ
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಕಾಶ್ಮೀರದಲ್ಲಿ ಹಿಂದು ಪ್ರವಾಸಿಗರ ಹತ್ಯೆ ಖಂಡಿಸಿ ಹಿಂದುಜಾಗರಣಾ ವೇದಿಕೆ ಸೇರಿ ಹಿಂದುಪರ ಸಂಘಟನೆಗಳ ಕಾರ್ಯಕರ್ತರು ತಾಲೂಕು ಕಚೇರಿಗೆ ಎದುರು ಪ್ರತ್ಯೇಕ ಪ್ರತಿಭಟಿಸಿದರು.ಹಿಂದು ಜಾಗರಣಾ ವೇದಿಕೆ ಮುಖಂಡ ಚಂದನ್ ಹಾಗೂ ವಿಶ್ವ ಹಿಂದು ಪರಿಷತ್ತಿನ ಸುನೀಲ್ ನೇತೃತ್ವದಲ್ಲಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಕಾಶ್ಮೀರಕ್ಕೆ ಪ್ರವಾಸಕ್ಕೆ ಹೋಗಿದ್ದ ಹಿಂದುಗಳನ್ನು ವಿವಸ್ತ್ರಗಳಿಸಿ ಗುಂಡಿಕ್ಕಿ ಕೊಲ್ಲುವ ಉಗ್ರರಿಗೆ ಕೇಂದ್ರ ಸರ್ಕಾರ ತಕ್ಕ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.
ಕಾಶ್ಮೀರ ಉಗ್ರರ ಸಮರ್ಥಿಸಿಕೊಂಡ ಸ್ಥಳೀಯ ಶಾಸಕರ ಕ್ರಮವನ್ನು ಖಂಡಿಸಿದ ಪ್ರತಿಭಟನಾಕಾರರು ಶಾಸಕರ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಿಮ್ಮ ಕುಟುಂಬ ಮತ್ತು ಮಕ್ಕಳಿಗೂ ಇಂತಹ ಸ್ಥಿತಿ ಬಂದರೆ ಯಾವ ಕ್ರಮ ಕೈಗೊಳ್ಳುತ್ತೀರಿ ಎಂದು ಸಾರ್ವಜನಿಕವಾಗಿ ಪ್ರತಿಟನಾಕಾರರು ಪ್ರಶ್ನೆ ಮಾಡಿದರು.ನೀವೊಬ್ಬ ಹಿಂದು ಮತಗಳ ಪಡೆದು ಮುಸ್ಲೀಂ ಪರ ಮಾತನಾಡುವರಾಗಿದ್ದೀರಿ. ಕೂಡಲೆ ಬಹಿರಂಗ ಹೇಳಿಕೆ ನೀಡಿ ಕ್ಷಮೆಯಾಚಿಸುವಂತೆ ಆಗ್ರಹಿಸಿದರು.
ಪಟ್ಟಣದ ಕುವೆಂಪು ವೃತ್ತದಿಂದ ಮೆರವಣಿಗೆ ಮೂಲಕ ಪಟ್ಟಣದ ಬೀದಿಯಲ್ಲಿ ಜಾಥಾ ನಡೆಸಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಧರಣಿ ನಡೆಸಿದರು. ನಂತರ ತಹಸೀಲ್ದಾರ್ ಪರುಶುರಾಮ್ ಸತ್ತಿಗೇರಿ ಅವರಿಗೆ ಮನವಿ ಸಲ್ಲಿಸಿದರು.ಪ್ರತಿಭಟನೆಯಲ್ಲಿ ಹಿಂದುಪರ ಮುಖಂಡರಾದ ಹೇಮಂತ್ ಕುಮಾರ್, ಕಿರಣ್, ಪಶ್ಚಿಮವಾಹಿನಿ ಸರಸ್ವತಿ, ವೆಂಕಟೇಶ್, ವಿಶ್ವನಾಥ್, ಲಕ್ಷ್ಮಿ ನಾರಾಯಣ ಇತರ ಮುಖಂಡರು ಭಾಗವಹಿಸಿದ್ದರು.
ಇಂದು ವಿದ್ಯುತ್ ವ್ಯತ್ಯಯಮಂಡ್ಯ: ತಾಲೂಕಿನ ವಿ.ಸಿ.ಫಾರಂ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಲಿಂಕ್ ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.25 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿ.ಸಿ.ಫಾರಂ, ಶಿವಳ್ಳಿ, ದುದ್ದ, ಬಿ.ಹಟ್ನ, ಬೇವಕಲ್ಲು, ಹುಲಿಕೆರೆ, ಚಂದಗಾಲು, ಹುಲ್ಲೇನಹಳ್ಳಿ, ಬಿಳಗುಲಿ ಹಾಗೂ ಈ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.