ಸಾರಾಂಶ
ರಾಮನಗರ: ಪಾನಮತ್ತ ವ್ಯಕ್ತಿಯೊಬ್ಬ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ಪರಿಣಾಮ ಮಹಿಳಾ ಉದ್ಯೋಗಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ನಗರದ ಮಾಗಡಿ ರಸ್ತೆಯಲ್ಲಿ ಬುಧವಾರ ಸಂಜೆ ನಡೆದಿದೆ. ತಾಲೂಕಿನ ಬಿಳಗುಂಬ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಥಮದರ್ಜೆ ಸಹಾಯಕಿ ರೂಪಾ ಮೃತರು. ಕೆಲಸ ಮುಗಿಸಿಕೊಂಡು ರೂಪಾ ಆಟೋದಲ್ಲಿ ಮನಗೆ ಹಿಂದಿರುಗುವಾಗ ದುರ್ಘಟನೆ ಸಂಭವಿಸಿದೆ.
ಘಟನೆಯ ವಿವರ: ಪಾನಮತ್ತನಾಗಿದ್ದ ನವೀನ ತನ್ನ ಕಾರನ್ನು ಅಡ್ಡಾದಿಡ್ಡಿ ಚಾಲನೆ ಮಾಡಿಕೊಂಡು ಬಂದು ಎದುರಿನಿಂದ ಬರುತ್ತಿದ್ದ ಆಟೋಗೆ ಡಿಕ್ಕಿಹೊಡೆದಿದ್ದಾನೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ರೂಪಾ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಆಟೋದಲ್ಲಿದ್ದ ಇತರ ಪ್ರಯಾಣಿಕರಿಗೂ ಗಾಯಗಳಾಗಿವೆ.ಮತ್ತೆ ಕಾರನ್ನು ಅಡ್ಡಾದಿಡ್ಡಿ ಚಾಲನೆ ಮಾಡಿದ ವ್ಯಕ್ತಿ ಎರಡು ಬೈಕ್‌ಗಳಿಗೆ ಹಾಗೂ ಅಂಗಡಿ ಮಳಿಗೆಗೆ ಡಿಕ್ಕಿ ಹೊಡೆದಿದ್ದಾನೆ. ಘಟನೆಯಲ್ಲಿ ಬೈಕ್‌ಗಳು ಸಂಪೂರ್ಣ ಜಖಂ ಆಗಿದ್ದು, ಅಂಗಡಿಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ.
ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು:ಕಾರನ್ನು ನಿಲ್ಲಿಸಿ ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸುತ್ತಿದ್ದ ಆರೋಪಿ ನವೀನ್‌ನನ್ನು ಹಿಡಿದು ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಮೃತ ಮಹಿಳೆ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ. ರಾಮನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
18ಕೆಆರ್ ಎಂಎನ್ 7,8.ಜೆಪಿಜಿ7.ಅಡ್ಡಾದಿಡ್ಡಿ ಚಾಲನೆ ಮಾಡಿ ಅಪಘಾತ ಮಾಡಿರುವ ಕಾರು.
8.ಮೃತ ಮಹಿಳೆ ರೂಪ