ಸಾರಾಂಶ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ 75ನೇ ವರ್ಷದ ಜನ್ಮದಿನದ ಅಂಗವಾಗಿ ನಡೆದ ಸೇವಾ ಪಾಕ್ಷಿಕ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಧಣಿವರಿಯದ ನಾಯಕ ನಮ್ಮ ದೇಶದ ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು. ದೇಶಕ್ಕೋಸ್ಕರ ಒಂದು ದಿನವೂ ರಜೆ ಪಡೆಯದೆ ದಿನದ ೧೮ ಗಂಟೆಗಳ ಕಾಲ ನಿರಂತರವಾಗಿ ಶ್ರಮಿಸುತ್ತಿರುವ ಏಕೈಕ ನಾಯಕ. ಜಿಲ್ಲೆಯಲ್ಲೆಡೆ ರಕ್ತದಾನ ಶಿಬಿರ ಆಯೋಜಿಸುವ ಮೂಲಕ ರಾಷ್ಟ್ರ ನಾಯಕರ ಸೂಚನೆಯ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ರಕ್ತದಾನ, ಆರೋಗ್ಯ ತಪಾಸಣೆ ಶಿಬಿರ, ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಅಭಿಯಾನ, ಗಿಡನೆಡುವ ಅಭಿಯಾನದಂತಹ ಕಾರ್ಯಕ್ರಮಗಳಲ್ಲಿ ಪ್ರತಿಯೊಬ್ಬರು ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಆಲೂರು: ಬಿಜೆಪಿ ಎಂದಿಗೂ ಅಧಿಕಾರ ಅಥವಾ ಚುನಾವಣೆಗಾಗಿ ದುಡಿಯುವ ಪಕ್ಷವಲ್ಲ, ಜನಸಾಮಾನ್ಯರ ಒಳಿತಿಗಾಗಿ ಹೋರಾಡುವ ಪಕ್ಷ ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.
ಪಟ್ಟಣದ ತಾಲೂಕು ಬಿಜೆಪಿ ಕಚೇರಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ 75ನೇ ವರ್ಷದ ಜನ್ಮದಿನದ ಅಂಗವಾಗಿ ನಡೆದ ಸೇವಾ ಪಾಕ್ಷಿಕ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಧಣಿವರಿಯದ ನಾಯಕ ನಮ್ಮ ದೇಶದ ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು. ದೇಶಕ್ಕೋಸ್ಕರ ಒಂದು ದಿನವೂ ರಜೆ ಪಡೆಯದೆ ದಿನದ ೧೮ ಗಂಟೆಗಳ ಕಾಲ ನಿರಂತರವಾಗಿ ಶ್ರಮಿಸುತ್ತಿರುವ ಏಕೈಕ ನಾಯಕ. ಜಿಲ್ಲೆಯಲ್ಲೆಡೆ ರಕ್ತದಾನ ಶಿಬಿರ ಆಯೋಜಿಸುವ ಮೂಲಕ ರಾಷ್ಟ್ರ ನಾಯಕರ ಸೂಚನೆಯ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ರಕ್ತದಾನ, ಆರೋಗ್ಯ ತಪಾಸಣೆ ಶಿಬಿರ, ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಅಭಿಯಾನ, ಗಿಡನೆಡುವ ಅಭಿಯಾನದಂತಹ ಕಾರ್ಯಕ್ರಮಗಳಲ್ಲಿ ಪ್ರತಿಯೊಬ್ಬರು ಭಾಗವಹಿಸಬೇಕು ಎಂದು ಮನವಿ ಮಾಡಿದರು.ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದೇಶ್ ನಾಗೆಂದ್ರ ಮಾತನಾಡಿ, ಸ್ವಚ್ಛತಾ ಅಭಿಯಾನ, ತಾಯಿ ಹೆಸರಿನಲ್ಲಿ ಒಂದು ಸಸಿ ನೆಡುವುದು, ಕ್ರೀಡೆ ಹಾಗೂ ಚಿತ್ರಕಲಾ ಸ್ಪರ್ಧೆಯಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಆಲೂರು-ಕಟ್ಟಾಯ ಮಂಡಲದ ಬಿಜೆಪಿ ಅಧ್ಯಕ್ಷೆ ಉಮಾ ರವಿಪ್ರಕಾಶ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕೃಷ್ಣ ಅಬ್ಬನ, ಮುಖಂಡರಾದ ಎ. ಎಚ್. ರಮೇಶ್, ರಾಜ್ ಕುಮಾರ್, ಕದಾಳು ಲೋಕೇಶ್ ಇತರರು ಉಪಸ್ಥಿತರಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))