ಸೇವೆಯೇ ರೋಟರಿ ಸಂಸ್ಥೆಯ ಮುಖ್ಯ ಉದ್ದೇಶ

| Published : Jun 10 2025, 08:59 AM IST

ಸೇವೆಯೇ ರೋಟರಿ ಸಂಸ್ಥೆಯ ಮುಖ್ಯ ಉದ್ದೇಶ
Share this Article
  • FB
  • TW
  • Linkdin
  • Email

ಸಾರಾಂಶ

ರೋಟರಿ ಸಂಸ್ಥೆಯ ಮುಖ್ಯ ಉದ್ದೇಶವೇ ಸೇವೆ ಆಗಿದ್ದು, ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ನೂರಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಜಿ.ಕಿರಣ್ ಕುಮಾರ್ ಹೇಳಿದರು.ರೋಟರಿ ಕ್ಲಬ್ ಶಿವಮೊಗ್ಗ ವತಿಯಿಂದ ಅಭಯಧಾಮ ಸಂಸ್ಥೆಯಲ್ಲಿ ಹಮ್ಮಿಕೊಂಡ ಶೈಕ್ಷಣಿಕ ಬೆಂಬಲ ಕಾರ್ಯಕ್ರಮದಲ್ಲಿ ಎಚ್‌ಐವಿ ಸೋಂಕಿತ 80 ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್‌ಗಳನ್ನು ವಿತರಿಸಿ ಮಾತನಾಡಿದರು.

ಶಿವಮೊಗ್ಗ: ರೋಟರಿ ಸಂಸ್ಥೆಯ ಮುಖ್ಯ ಉದ್ದೇಶವೇ ಸೇವೆ ಆಗಿದ್ದು, ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ನೂರಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಜಿ.ಕಿರಣ್ ಕುಮಾರ್ ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ವತಿಯಿಂದ ಅಭಯಧಾಮ ಸಂಸ್ಥೆಯಲ್ಲಿ ಹಮ್ಮಿಕೊಂಡ ಶೈಕ್ಷಣಿಕ ಬೆಂಬಲ ಕಾರ್ಯಕ್ರಮದಲ್ಲಿ ಎಚ್‌ಐವಿ ಸೋಂಕಿತ 80 ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್‌ಗಳನ್ನು ವಿತರಿಸಿ ಮಾತನಾಡಿದರು.

ರೋಟರಿ ಸಂಸ್ಥೆಯು ಯಾವುದೇ ರಾಜಕೀಯ ಪಕ್ಷಕ್ಕೆ ಮತ್ತು ಯಾವುದೇ ಧರ್ಮಕ್ಕೆ ಸೇರಿರುವುದಿಲ್ಲ. ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಸಂಸ್ಥೆ ವತಿಯಿಂದ ರಸ್ತೆ ಮತ್ತು ಸುರಕ್ಷತೆ, ಹಸಿರು ಮತ್ತು ನೀರಿನ ಅರಿವು, ಆರೋಗ್ಯ ಮತ್ತು ಸ್ವಚ್ಛತೆ ಹಾಗೂ ಶಿಕ್ಷಣ ಮತ್ತು ಕಾನೂನಿನ ಅರಿವು ಕುರಿತಾದ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದರು.

ಈ ದಿನ ಸೋಂಕಿತ ಮಕ್ಕಳಿಗೆ ಶೈಕ್ಷಣಿಕ ಬೆಂಬಲ ನೀಡುತ್ತಿರುವುದು ಮಕ್ಕಳ ಭವಿಷ್ಯಕ್ಕೆ ಅನುಕೂಲವಾಗಲಿದೆ. ಈ ಕಾರ್ಯಕ್ಕೆ ದೇಣಿಗೆ ನೀಡಿದಂತಹ ಸದಸ್ಯರಿಗೆ ಅಭಿನಂದನೆಗಳು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಕ್ಕಳ ಸಹಾಯವಾಣಿ ಕೇಂದ್ರದ ಮಧು ಹಾಗೂ ಅಭಯಧಾಮ ಅಧ್ಯಕ್ಷೆ ಜಯಲಕ್ಷ್ಮೀ ಹಾಗೂ ಸಿಬ್ಬಂದಿ ವರ್ಗ, ಸ್ವಯಂ ಸೇವಕರು ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಸಹ ಕಾರ್ಯದರ್ಶಿ ಜಯಶೀಲ ಶೆಟ್ಟಿ, ಮಾಜಿ ಸಹಾಯಕ ಗವರ್ನರ್ ರವಿ ಕೋಟೋಜಿ, ಧರ್ಮೇಂದ್ರ ಸಿಂಗ್ ನಟರಾಜ್ ಕೆ.ಆರ್., ಬಸವರಾಜ್, ಜ್ಯೋತಿ ಶ್ರೀರಾಮ್, ದೀಪಾ ಶೆಟ್ಟಿ, ಜಗದೀಶ್ ಮತ್ತು ಅನ್ ಕ್ಲಬ್ಬಿನ ಅಧ್ಯಕ್ಷೆ ಗೀತಾ ಜಗದೀಶ್ ಹಾಜರಿದ್ದರು.