ಸಾರಾಂಶ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಸೇವಾ ಪಾಕ್ಷಿಕ ಆಚರಿಸುತ್ತಿದ್ದು, ಇದರಲ್ಲಿ ಯುವಕರು ರಕ್ತದಾನ ಮೂಲಕ ದೇಶಕ್ಕೆ ಕೊಡುಗೆ ನೀಡಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.
ಕನ್ನಡಪ್ರಭ ವಾರ್ತೆ ಶಿರಾ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಸೇವಾ ಪಾಕ್ಷಿಕ ಆಚರಿಸುತ್ತಿದ್ದು, ಇದರಲ್ಲಿ ಯುವಕರು ರಕ್ತದಾನ ಮೂಲಕ ದೇಶಕ್ಕೆ ಕೊಡುಗೆ ನೀಡಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.ಅವರು ಮಂಗಳವಾರ ನಗರದ ಸೇವಾ ಸದನದಲ್ಲಿ ಭಾರತೀಯ ಜನತಾ ಪಾರ್ಟಿ ಮಧುಗಿರಿ ಸಂಘಟನಾತ್ಮಕ ಜಿಲ್ಲೆಯ ವತಿಯಿಂದ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು. ರಕ್ತದಾನ ಶ್ರೇಷ್ಠದಾನಗಳಲ್ಲಿ ಒಂದಾಗಿದ್ದು, ತುರ್ತು ಸಂದರ್ಭದಲ್ಲಿ ರೋಗಿಗಳ ಜೀವ ಉಳಿಯುತ್ತದೆ. ಇಂದು ನಡೆದ ರಕ್ತದಾನದಲ್ಲಿ ಸುಮಾರು ೧೦೦ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ರಕ್ತದಾನ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ರಾಷ್ಟ್ರೋತ್ಥಾನ ರಕ್ತ ಭಂಡಾರದ ಮೂಲಕ ರಕ್ತದಾನ ಸಂಗ್ರಹಿಸಲಾಗಿದೆ. ರಾಷ್ಟ್ರೋತ್ಥಾನ ಸಂಘಟನೆಯಲ್ಲಿ ತುರ್ತು ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಇದ್ದಾಗ ರಕ್ತದ ವ್ಯವಸ್ಥೆ ಮಾಡುತ್ತಾರೆ. ಆದ್ದರಿಂದ ಆ ಸಂಘಟನೆಯ ಮೂಲಕ ರಕ್ತ ಸಂಗ್ರಹಿಸಲಾಗಿದೆ. ಪ್ರತಿ ವರ್ಷವೂ ಈ ಕಾರ್ಯ ಮುಂದುವರೆಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ದಿಶಾ ಸಮಿತಿ ಸದಸ್ಯರಾದ ಮದಲೂರು ಮೂರ್ತಿ ಮಾಸ್ಟರ್, ಮಧುಗಿರಿ ಸಂಘಟನಾತ್ಮಕ ಜಿಲ್ಲಾಧ್ಯಕ್ಷೆ ಉಮಾ ವಿಜಯರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂಜಲಗೆರೆ ಮೂರ್ತಿ, ನಗರ ಮಂಡಲ ಅಧ್ಯಕ್ಷರಾದ ಗಿರಿಧರ್, ನಿಕಟ ಪೂರ್ವ ಮಂಡಲ ಅಧ್ಯಕ್ಷರಾದ ಚಿಕ್ಕಣ್ಣ, ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷರಾದ ಮಂಜುನಾಥ್, ಉಪಾಧ್ಯಕ್ಷರಾದ ನಾಗರಾಜ್ ಗೌಡ, ಬಪ್ಪರಾಯಪ್ಪ, ರೈತ ಮೋರ್ಚಾ ಅಧ್ಯಕ್ಷರಾದ ಮದ್ದೆವಳ್ಳಿ ರಾಮಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಹಾಗೂ ಹನುಮಂತ ನಾಯ್ಕ ಇತರರಿದ್ದರು.