ಜಯನಗರದ ತಿಲಕ್ ನಗರ ವಾರ್ಡ್ ಎಲ್‌ಐಸಿ ಕಾಲೋನಿಯಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ, ಜಯನಗರ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎನ್.ನಾಗರಾಜು ನೇತೃತ್ವದಲ್ಲಿ ಸುಮಾರು ಹತ್ತು ಸಾವಿರ ಜನರಿಗೆ, ಪೌರ ಕಾರ್ಮಿಕರಿಗೆ ಎಳ್ಳು-ಬೆಲ್ಲ ವಿತರಣೆ ಮಾಡಲಾಯಿತು.
ಕನ್ನಡಪ್ರಭ ವಾರ್ತೆ ಬೆಂಗಳೂರು
ಜಯನಗರದ ತಿಲಕ್ ನಗರ ವಾರ್ಡ್ ಎಲ್‌ಐಸಿ ಕಾಲೋನಿಯಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ, ಜಯನಗರ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎನ್.ನಾಗರಾಜು ನೇತೃತ್ವದಲ್ಲಿ ಸುಮಾರು ಹತ್ತು ಸಾವಿರ ಜನರಿಗೆ, ಪೌರ ಕಾರ್ಮಿಕರಿಗೆ ಎಳ್ಳು-ಬೆಲ್ಲ ವಿತರಣೆ ಮಾಡಲಾಯಿತು.ಅವರು ಗೋಪೂಜೆ ಸಲ್ಲಿಸಿ ಜನರಿಗೆ ಕಬ್ಬು, ಎಳ್ಳುಬೆಲ್ಲ ವಿತರಿಸಿದರು. ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಸಹಕಾರ ನೀಡಿದರು. ಸಂಕ್ರಾಂತಿ ಹಬ್ಬದ ಅಂಗವಾಗಿ ಮಹಿಳೆಯರು ಬೃಹತ್ ರಂಗೋಲಿ ಬಿಡಿಸಿ ಸಂಭ್ರಮಿಸಿದರು.