2015ರಿಂದ ಸಹಾಯಕ ಎಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿದ್ದ ಸಂಪತ್‌, ಸರ್ಕಾರದ ಆದೇಶದಂತೆ ಹಾಸನ ಜಿಲ್ಲೆಗೆ ವರ್ಗಾವಣೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಕಚೇರಿಯಲ್ಲಿ ಭೇಟಿಯಾದ ಫೋರಂ ಸ್ಥಾಪಕಾಧ್ಯಕ್ಷ ಚೈಯ್ಯಂಡ ಸತ್ಯ ಗಣಪತಿ, ಲೈನ್‌ಮನ್‌ಗಳ ಮೂಲಕ ಶಾಲು ಹೊದಿಸಿ ಗೌರವಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮದ ಸಹಾಯಕ ಎಂಜಿನಿಯರ್‌ ಎ.ಆರ್.‌ ಸಂಪತ್‌ ಅವರಿಗೆ ವರ್ಗಾವಣೆಯಾಗಿದ್ದು, ಅವರನ್ನು ಗ್ರೀನ್‌ ಸಿಟಿ ಫೋರಂ ವತಿಯಿಂದ ಅಭಿನಂದಿಸಿ ಬೀಳ್ಕೊಡಲಾಯಿತು.2015ರಿಂದ ಸಹಾಯಕ ಎಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿದ್ದ ಸಂಪತ್‌, ಸರ್ಕಾರದ ಆದೇಶದಂತೆ ಹಾಸನ ಜಿಲ್ಲೆಗೆ ವರ್ಗಾವಣೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಕಚೇರಿಯಲ್ಲಿ ಭೇಟಿಯಾದ ಫೋರಂ ಸ್ಥಾಪಕಾಧ್ಯಕ್ಷ ಚೈಯ್ಯಂಡ ಸತ್ಯ ಗಣಪತಿ, ಲೈನ್‌ಮನ್‌ಗಳ ಮೂಲಕ ಶಾಲು ಹೊದಿಸಿ ಗೌರವಿಸಿದರು.ಸಂಪತ್‌ ಅವರ ಕಾರ್ಯನಿರ್ವಹಣೆಯ ಅವಧಿ ಸುಲಭದ್ದಾಗಿರಲಿಲ್ಲ. 2018ರ ನಂತರ ಪ್ರಕೃತಿ ವಿಕೋಪ, ಪ್ರವಾಹದಂತಹ ಕಠಿಣ ಪರಿಸ್ಥಿತಿಯಲ್ಲಿ ಜನರಿಗೆ ಹೆಚ್ಚು ಸಮಸ್ಯೆಯಾಗದ ರೀತಿ ಕಾರ್ಯ ನಿರ್ವಹಿಸಿದ್ದಾರೆ. ಕಠಿಣ ಸಂದರ್ಭದಲ್ಲಿ ತನ್ನ ಸಿಬ್ಬಂದಿಯನ್ನು ಸಮರ್ಥ ರೀತಿಯಲ್ಲಿ ಬಳಸಿಕೊಂಡು ಜನ ಮನ್ನಣೆ ಗಳಿಸಿದ್ದಾರೆಂದು ಸತ್ಯ ಗಣಪತಿ ಮೆಚ್ಚುಗೆ ವ್ಯಕ್ತಪಡಿಸಿದರು.ತನ್ನ ಕರ್ತವ್ಯ ನಿರ್ವಹಣೆ ಸಂದರ್ಭದಲ್ಲಿ ಸಹಕರಿಸಿದ ಸಾರ್ವಜನಿಕರಿಗೆ ಸಂಪತ್‌ ಧನ್ಯವಾದ ಸಲ್ಲಿಸಿದರು. ಈ ಸಂದರ್ಭ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.