ಸಾರಾಂಶ
ಕನ್ನಡಪ್ರಭ ವಾರ್ತೆ ಪಾವಗಡ
ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ಗೆ ಗುರುವಾರ ಚುನಾವಣೆ ನಡೆದಿದ್ದು ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಕಡಮಕಲಕುಂಟೆ ಶೇಷಗಿರಿಯಪ್ಪ ಹಾಗೂ ಉಪಾಧ್ಯಕ್ಷರಾಗಿ ಅನಿತಾ ಈರಣ್ಣ ಅವಿರೋಧ ಆಯ್ಕೆಯಾಗಿದ್ದಾರೆ.ಕಳೆದ 15ದಿನಗಳ ಹಿಂದೆ ಇಲ್ಲಿನ ಪಿಎಲ್‌ಡಿ ಬ್ಯಾಂಕಿನ ನಿರ್ದೇಶಕರ ಆಯ್ಕೆಗೆ ಚುನಾವಣೆ ನಡೆದಿದ್ದು ಈ ವೇಳೆ 13ನಿರ್ದೇಶಕ ಸ್ಥಾನಗಳ ಪೈಕಿ ಕಾಂಗ್ರೆಸ್ 9 ಹಾಗೂ ಜೆಡಿಎಸ್ ಬೆಂಬಲಿತ 3 ಸೇರಿ ಒಟ್ಟು 12ಮಂದಿ ಬ್ಯಾಂಕಿನ ನೂತನ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದರು.1 ಸ್ಥಾನಕ್ಕೆ ತಾಲೂಕಿನ ನಾಗಲಮಡಿಕೆ ಕ್ಷೇತ್ರಕ್ಕೆ ಚುನಾವಣೆ ನಡೆದು ಎಸ್.ವಿ.ಗೋವಿಂದಪ್ಪ ಜಯ ಸಾಧಿಸಿದ್ದರು. ಗುರುವಾರ ನಡೆದ ಚುನಾವಣೆಯಲ್ಲಿ ಶಾಸಕ ಎಚ್.ವಿ.ವೆಂಕಟೇಶ್ ಹಾಗೂ ಮಾಜಿ ಸಚಿವರಾದ ವೆಂಕಟರಮಣಪ್ಪ ಬೆಂಬಲಿತ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಶೇಷಗಿರಿಯಪ್ಪ ಹಾಗೂ ಉಪಾಧ್ಯಕ್ಷರಾಗಿ ಅನಿತಮ್ಮ ಅವಿರೋಧವಾಗಿ ಆಯ್ಕೆಯಾದರು. ಈ ವೇಳೆ ಸ್ಥಳದಲ್ಲಿದ್ದ ಮಾಜಿ ಸಚಿವ ವೆಂಕಟರಮಣಪ್ಪ ಶುಭ ಹಾರೈಸಿದರು. ಈ ವೇಳೆ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ತಾಳೆಮರದಹಳ್ಳಿ ನರಸಿಂಹಯ್ಯ, ಕೆಪಿಸಿಸಿ ಸದಸ್ಯ ಕೆ.ಎಸ್.ಪಾಪಣ್ಣ,ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೇಶ್ ಕುಮಾರ್, ಪುರಸಭೆ ಅಧ್ಯಕ್ಷ ಪಿ.ಎಚ್.ರಾಜೇಶ್, ಪಿ ಎಲ್ ಡಿ ಬ್ಯಾಂಕ್ ನ ನಿರ್ದೇಶಕರು ಇದ್ದರು.