ಸಾರಾಂಶ
ಕನ್ನಡಪ್ರಭ ವಾರ್ತೆ ಕೆಜಿಎಫ್ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಂಸ್ಕಾರವಂತ ಜೀವನ ನಡೆಸಲು ಹಾಗೂ ಆರೋಗ್ಯಕರ ಸಮಾಜ ಕಟ್ಟಲು ರಾಷ್ಟ್ರೀಯ ಸೇವಾ ಯೋಜನೆ ಪೂರಕ ವೇದಿಕೆ ಎಂದು ಕೆಜಿಎಫ್‌ನ ೩ನೇ ಅಪರ ಜಿಲ್ಲಾಸತ್ರ ನ್ಯಾಯಾಧೀಶರಾದ ಗಣಪತಿ ಗುರುಸಿದ್ದ ಬಾದಾಮಿ ತಿಳಿಸಿದರು.ಕೆಜಿಎಫ್‌ನ ಕೆಂಗಲ್ ಹನುಮಂತಯ್ಯ ಕಾನೂನು ವಿದ್ಯಾಲಯ, ಕೋಲಾರ ಜಿಲ್ಲಾ ನ್ಯಾಯಾಲಯಗಳ ಪ್ರಾಧಿಕಾರ, ರಾಮಸಾಗರ ಗ್ರಾ.ಪಂ ವ್ಯಾಪ್ತಿಯ ಕುಳೂರುನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ೨೦ ದಿನಗಳ ಸಮಾರೋಪ ಸಮಾರಂಭದ ಕಾರ್‍ಯಕ್ರಮ ಉದ್ಘಾಟಿಸಿ ಮಾತನಾಡಿದರು.ಸೇವಾ ಯೋಜನೆಯಲ್ಲಿ ಪಾಲ್ಗೊಳ್ಳಿ
ಕಾನೂನು ವಿದ್ಯಾರ್ಥಿಗಳು ಕಾಲೇಜುಗಳಲ್ಲಿ ನಡೆಯುವ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ಸಾಮಾಜಿಕವಾಗಿ ಹಾಗೂ ಗ್ರಾಮೀಣ ಭಾಗದ ಜನರ ಬದುಕಿನ ಸಮಸ್ಯೆಗಳನ್ನು ಅರಿತು ವ್ಯಕ್ತಿಗತವಾಗಿ ಅಭಿವೃದ್ದಿ ಹೊಂದಲು ಸಾಧ್ಯ ಎಂದರು.ಹಿರಿಯ ಸಿವಿಲ್ ನ್ಯಾಯಾಧೀಶರಾದ ಮುಜಫರ್ ಎ.ಮಾಂಜರಿ ಮಾತನಾಡಿ, ಶಿಬಿರದಲ್ಲಿ ಕಲಿತುಕೊಂಡ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಶಿಬಿರದಲ್ಲಿ ಪಾಲ್ಗೊಂಡ ಶಿಬಿರಾರ್ಥಿಗಳು ಸಂಸ್ಕಾರ ಹೆಚ್ಚಿಸುವಂತಹ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡಲ್ಲಿ ಭವಿಷ್ಯದಲ್ಲಿ ಉಪಯೋಗಕ್ಕೆ ಬರುವುದಾಗಿ ಅಭಿಪ್ರಾಯಪಟ್ಟರು.ದಾರಿ ಸಮಸ್ಯೆ ಪರಿಹರಿಸಿಕೊಳ್ಳಿಪ್ರಿನ್ಸಿಪಲ್ ಸಿವಿಲ್ ನ್ಯಾಯಾಧೀಶರಾದ ವಿನೋದ್ ಕುಮಾರ್ ಮಾತನಾಡಿ, ಸರ್ಕಾರದ ಆದೇಶದಂತೆ ಜಮೀನಿಗೆ ಹೋಗುವ ದಾರಿಗಳನ್ನು ಯಾರು ತಡೆ ಮಾಡುವಂತಿಲ್ಲ, ರೈತರು ಸೌಹರ್ದಯುತವಾಗಿ ಸಮಸ್ಯಗಳನ್ನು ಬಗೆಹರಿಸಿಕೊಳ್ಳಿ, ಇನ್ನೂ ಹೆಣ್ಣು ಮಕ್ಕಳ ಅಸ್ತಿಯ ಹಕ್ಕಿಗೆ ಸಂಬಂಧಿಸಿದಂತೆ ಗ್ರಾಮದ ಜನರಿಗೆ ಮಾಹಿತಿ ನೀಡಿದರು.
ಕೋಲಾರ ನ್ಯಾಯಾಲಯಗಳ ಪ್ರಾಧಿಕಾರದ ಕಾರ್‍ಯದರ್ಶಿ ಸುನಿಲ್ ಎಸ್ ಹೊಸಮುನಿ, ಕೆಜಿಎಫ್ ವಕೀಲರ ಸಂಘದ ಅಧ್ಯಕ್ಷ ರಾಜಗೋಪಾಲಗೌಡ ಮಾತನಾಡಿದರು.ಕಾನೂನು ವಿದ್ಯಾಲಯದ ಪ್ರಾಂಶುಪಾಲ ಮ್ಯಾಥ್ಯೂಸ್, ವಕೀಲರ ಸಂಘದ ಉಪಾಧ್ಯಕ್ಷರಾದ ಮಣಿವಣ್ಣನ್, ದೀನೇಶ್, ಉಪ ಪ್ರಾಂಶುಪಾಲರಾದ ಪ್ರಸನ್ನಕುಮಾರ್ ಇದ್ದರು.