ಸಾರಾಂಶ
ಕನ್ನಡಪ್ರಭ ವಾರ್ತೆ ಕೆಜಿಎಫ್ನಗರದ ಸಲ್ಡಾನಾ ವೃತ್ತದಲ್ಲಿರುವ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಒಳಗೆ ಹರಿಯುತ್ತಿದ್ದು, ಈ ಬಗ್ಗೆ ಕ್ರಮ ವಹಿಸುವಂತೆ ಹಲವು ಬಾರಿ ಸಂಬಂಧಪಟ್ಟ ಇಲಾಖೆಗಳಿಗೆ ಕಾಲೇಜು ಆಡಳಿತ ಪತ್ರ ವ್ಯವಹಾರ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಗಬ್ಬು ನಾರುತ್ತಿರುವ ಮಲಿನ ನೀರಿನಿಂದಾಗಿ ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ. ಶಾಲಾ ಆವರಣದಲ್ಲಿ ಹರಿಯುತ್ತಿರುವ ಚರಂಡಿ ನೀರಿನಿಂದಾಗಿ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಕೊಳಚೆ ನೀರಿನ ಪಕ್ಕದಲ್ಲಿಯೇ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪ್ರತಿನಿತ್ಯ ತರಗತಿ ಕೋಣೆಗೆ ನಡೆದುಕೊಂಡು ಹೋಗಬೇಕಾಗಿದೆ.
ಸಾಂಕ್ರಾಮಿಕ ರೋಗ ಭೀತಿಶಾಲೆಯಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರು ಮತ್ತು ವ್ಯಾಸಂಗ ಮಾಡುತ್ತಿರುವ ಮಕ್ಕಳು ಗಬ್ಬು ನಾರುತ್ತಿರುವ ಪರಿಸರದಲ್ಲಿ ಕಾಲ ಕಳೆಯಬೇಕಾದ ಅನಿವಾರ್ಯತೆ ಎದುರಾಗಿದೆ. ನಗರದ ವಿವಿಧ ಭಾಗಗಳಿಂದ ಒಳ ಚರಂಡಿ ಮೂಲಕ ಹಾದು ಹೋಗುವ ಶೌಚಾಲಯದ ನೀರು ಶಾಲಾ ಆವರಣದಲ್ಲಿ ಹರಿಯುತ್ತಿರುವುದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.
ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಇದೇ ತಿಂಗಳ ೧೯ರಿಂದ ಕ್ರೀಡಾಕೂಟ ಪ್ರಾರಂಭವಾಗಲಿದೆ. ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು ತಾಲೂಕಿನ ವಿವಿಧ ಶಾಲೆಗಳ ಕ್ರೀಡಾಪಟುಗಳು ಇಲ್ಲಿಗೆ ಆಗಮಿಸಲಿದ್ದು, ಆರೋಗ್ಯದ ದೃಷ್ಟಿಯಿಂದ ಅಗತ್ಯ ಎಚ್ಚರಿಕೆ ವಹಿಸಬೇಕಿದೆ.ಕ್ರಮ ಕೈಗೊಳ್ಳಲು ಒತ್ತಾಯ
ಈಗಾಗಲೇ ರಾಜ್ಯದ ನಾನಾ ಭಾಗಗಳಲ್ಲಿ ಕಲುಷಿತ ನೀರಿನಿಂದಾಗಿ ಹಲವು ಅವಘಡಗಳು ಸಂಭವಿಸಿರುವುದು ನಮ್ಮ ಕಣ್ಣ ಮುಂದೆಯೇ ಇದ್ದು, ಇಂತಹ ಘಟನೆಗಳು ಸಂಭವಿಸದಂತೆ ಸಂಬಂಧಪಟ್ಟ ಇಲಾಖೆಯವರು ಎಚ್ಚೆತ್ತುಕೊಂಡು ಸೂಕ್ತ ವ್ಯವಸ್ಥೆ ಕಲ್ಪಿಸಿ ಒಳ ಚರಂಡಿ ನೀರು ಕಾಲೇಜಿನ ಆವರಣದಲ್ಲಿ ಹರಿಯದಂತೆ ಕ್ರಮ ವಹಿಸಬೇಕಿದೆ.ಕೋಟ್.........................ಒಳ ಚರಂಡಿ ನೀರು ಶಾಲಾ ಆವರಣದಲ್ಲಿ ಹರಿಯುತ್ತಿರುವುದು ನನ್ನ ಗಮನಕ್ಕೆ ಬಂದ ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ನಗರಸಭೆ ಅಧಿಕಾರಿಗಳಿಗೆ ಕ್ರಮ ವಹಿಸುವಂತೆ ಸೂಚಿಸಿದ್ದೇನೆ. ಆದಷ್ಟು ಬೇಗನೇ ಮಲಿನಯುಕ್ತ ನೀರು ಶಾಲಾ ಆವರಣದಲ್ಲಿ ಹರಿಯುವುದನ್ನು ನಿಲ್ಲಿಸಲು ಕ್ರಮ ವಹಿಸಲಾಗುವುದು.
– ಮಂಜುನಾಥ್, ಪ್ರಭಾರಿ ಬಿಇಒ ಕೆಜಿಎಫ್.ಕೋಟ್.........................................................
ಕಳೆದ ಮರ‍್ನಾಲ್ಕು ತಿಂಗಳಿನಿAದ ಮಲಿನಯುಕ್ತ ಒಳ ಚರಂಡಿ ನೀರು ಶಾಲಾ ಕಾಂಪೌAಡ್ ಆವರಣದಲ್ಲಿ ಹರಿಯುತ್ತಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಇದ್ದು, ಸರಿಪಡಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ, ನಗರಸಭೆಗೆ ಪತ್ರ ವ್ಯವಹಾರ ನಡೆಸಲಾಗಿದೆ. ಆದರೆ ಸಮಸ್ಯೆ ಇನ್ನೂ ಬಗೆಹರಿದಿಲ್ಲ.- ಗಾಯತ್ರಿ, ಉಪ ಪ್ರಾಂಶುಪಾಲೆ,ಪಪೂ ಕಾಲೇಜು
ಚಿತ್ರಗಳು: