ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ ಅರ್ಹ ಫಲಾನುಭವಿ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.
ಕುಶಾಲನಗರ: ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ ಅರ್ಹ ಫಲಾನುಭವಿ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.
ಕುಶಾಲನಗರ ಕನ್ನಿಕಾ ಇಂಟರ್‌ನ್ಯಾಶನಲ್ ಹೋಟೆಲ್ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಡಿಕೇರಿ ಶಾಸಕ ಮಂತರ್ ಗೌಡ ಅವರು 20 ಫಲಾನುಭವಿ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಿಸಿದರು.ಈ ಸಂದರ್ಭ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿಪಿ ಶಶಿಧರ್, ಜಿಪಂ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ದೇವರಾಜ ಅರಸ್ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಮಹದೇವಿ ಮತ್ತಿತರರಿದ್ದರು.