ಮಹಿಳಾ ಸ್ವಾವಲಂಬನೆಗೆ ಹೊಲಿಗೆ ಯಂತ್ರ ವಿತರಣೆ: ಕೆ.ಎಸ್.ಆನಂದ್

| Published : Jul 12 2024, 01:37 AM IST

ಮಹಿಳಾ ಸ್ವಾವಲಂಬನೆಗೆ ಹೊಲಿಗೆ ಯಂತ್ರ ವಿತರಣೆ: ಕೆ.ಎಸ್.ಆನಂದ್
Share this Article
  • FB
  • TW
  • Linkdin
  • Email

ಸಾರಾಂಶ

ಕಡೂರು, ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

-36 ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರ

ಕನ್ನಡಪ್ರಭ ವಾರ್ತೆ, ಕಡೂರು

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.ಪಟ್ಟಣದ ಶಾಸಕರ ಕಚೇರಿಯ ಆವರಣದಲ್ಲಿ ನಿಗಮದಿಂದ ನಡೆದ ಕಾರ್ಯಕ್ರಮದಲ್ಲಿ ತಾಲೂಕಿನ 36 ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿ ಮಾತನಾಡಿದರು. ಮಹಿಳೆ ನಾಲ್ಕು ಗೋಡೆಗೆ ಸೀಮಿತವಾಗದೆ ಸ್ವ-ಉದ್ಯೋಗದತ್ತ ಮುಖ ಮಾಡಿ ಆರ್ಥಿಕ ಶಕ್ತಿಯಾಗಿ ಮಹಿಳೆ ಹೊರ ಹೊಮ್ಮಿದ್ದು ಇದಕ್ಕೆ ಪೂರಕವಾಗಿ ಸರ್ಕಾರ ಈ ಇಲಾಖೆ ಮೂಲಕ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಬಡ ಮಹಿಳೆಯರಿಗೆ ಹೊಲಿಗೆಯಂತ್ರದ ಸಹಾಯದಿಂದ ಆರ್ಥಿಕವಾಗಿ ಮೇಲೆ ಬರಲು ಸಾಧ್ಯವಾಗುತ್ತದೆ ಎಂದರು. ನಮ್ಮ ಸರ್ಕಾರದಲ್ಲಿ ಮಹಿಳೆಯರಿಗೆ ಹೆಚ್ಚಿನ ಒತ್ತು ನೀಡಿ ವಿವಿಧ ಇಲಾಖೆಗಳು ಹಾಗೂ ಗ್ಯಾರಂಟಿ ಯೋಜನೆಗಳನ್ನು ಸಾವಿರಾರು ಕುಟುಂಬಗಳು ಅವಲಂಭಿಸಿರುವುದನ್ನು ಕಾಣಬಹುದು. ಬಿಸಿಎಂ ಇಲಾಖೆಯಿಂದ ಗಂಗಾ ಕಲ್ಯಾಣ ಯೋಜನೆ ಯಿಂದ ರೈತರಿಗೆ ಅನುಕೂಲವಾಗುತ್ತಿದೆ. ಕೌಶಲ್ಯಾಭಿವೃದ್ಧಿ ತರಬೇತಿ, ಸ್ವಾವಲಂಬಿ-ಸ್ವಯಂ ಉದ್ಯೋಗ ಸಾಲ ಯೋಜನೆ ಗಳು ಸಣ್ಣ ಸಣ್ಣ ಸಮಾಜದವರಿಗೆ ಸಹಕಾರಿಯಾಗಿದೆ. ಇಲಾಖೆ ಅಧಿಕಾರಿಗಳನ್ನು ಭೇಟಿಯಾಗಿ ಯೋಜನೆಗಳ ಬಗ್ಗೆ ಮಾಹಿತಿ ಪಡೆದು ಸದುಪಯೋಗಪಡಿಸಿಕೊಳ್ಳಿ ಎಂದರು.ಹಿಂದುಳಿದ ವರ್ಗಗಳ ಇಲಾಖೆ ಜಿಲ್ಲಾ ವ್ಯವಸ್ಥಾಪಕ ಟಿ.ರಾಕೇಶ್ ಮಾತನಾಡಿ 2023-24ನೇ ಸಾಲಿನಲ್ಲಿ ಕಡೂರು ತಾಲೂಕಿನ 36 ಮಹಿಳಾ ಫಲಾನುಭವಿಗಳನ್ನು ಆಯ್ಕೆ ಮಾಡಿ ಹೊಲಿಗೆಯಂತ್ರಗಳನ್ನು ನೀಡಲಾಗಿದೆ. ಇಂತಹ ಅನೇಕ ಯೋಜನೆಗಳಿದ್ದು, ನಮ್ಮ ಅಧಿಕಾರಿಗಳನ್ನು ಭೇಟಿ ಮಾಡಿ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.ಇಲಾಖೆ ನಂದೀಶ್ ಮತ್ತು ಪ್ರವೀಣ್ ಹಾಗೂ ಫಲಾನುಭವಿಗಳು ಇದ್ದರು.11ಕೆಕೆಡಿಯು1.

ಕಡೂರು ಪಟ್ಟಣದ ಶಾಸಕರ ಕಚೇರಿಯಲ್ಲಿ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.