ಮಡಿಕೇರಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆ ಗರ್ಭಿಣಿಯಾಗಲು ಕಾರಣನಾದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಡಿಕೇರಿ ತಾಲೂಕಿನ ನಾಲಡಿ ಗ್ರಾಮದ ನಿವಾಸಿ ಜಯ ವೈ.ಎಂ. ಎಂಬಾತನಿಗೆ ಮಡಿಕೇರಿಯ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.ಪ್ರಕರಣದ ವಿವರಗಳ ಪ್ರಕಾರ, ಆರೋಪಿ 2021ರ ಜುಲೈನಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಪರಿಚಯಿಸಿಕೊಂಡು, ಆಕೆಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಬಳಿಕ 2021ರ ಆಗಸ್ಟ್‌ನಿಂದ ನವೆಂಬರ್‌ವರೆಗೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿ, ಬಾಲಕಿ ಗರ್ಭಿಣಿಯಾಗಲು ಕಾರಣನಾಗಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಕುರಿತು ನೊಂದ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಮಡಿಕೇರಿಯ ಕೊಡಗು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಪೊಲೀಸ್ ನಿರೀಕ್ಷಕರಾದ ವೆಂಕಟೇಶ್ ಪಿ.ವಿ. ಹಾಗೂ ಮುದ್ದು ಮಾದೇವ ಎಂ.ಇ. ನಡೆಸಿ, ಭಾರತೀಯ ದಂಡ ಸಂಹಿತೆ ಹಾಗೂ ಪೋಕ್ಸೊ ಕಾಯ್ದೆಯಡಿ ದೋಷಾರೋಪಣಾ ಪತ್ರವ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.ಪ್ರಕರಣದ ವಿಚಾರಣೆ ನಡೆಸಿದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುರೇಂದ್ರ ಜಿ. ಅವರು ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ, ಪೋಕ್ಸೊ ಕಾಯ್ದೆಯಡಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, 20,000 ರು. ದಂಡ ವಿಧಿಸಿದ್ದಾರೆ. ಜೊತೆಗೆ ನೊಂದ ಬಾಲಕಿಗೆ 4 ಲಕ್ಷ ರು. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕ ಬಿ.ಎಸ್. ರುದ್ರ ಪ್ರಸನ್ನ ವಾದ ಮಂಡಿಸಿದ್ದರು.ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆ ಗರ್ಭಿಣಿಯಾಗಲು ಕಾರಣನಾದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಡಿಕೇರಿ ತಾಲೂಕಿನ ನಾಲಡಿ ಗ್ರಾಮದ ನಿವಾಸಿ ಜಯ ವೈ.ಎಂ. ಎಂಬಾತನಿಗೆ ಮಡಿಕೇರಿಯ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.